ಜುಲೈ 1ರಂದು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಾಗರೀಕ ಬಂದೂಕು ತರಬೇತಿ ಶಿಬಿರವನ್ನು ನಡೆಸಲಾಗುತ್ತಿದೆ.
ಎಲ್ಲ ರೀತಿಯ ಶಸ್ತ್ರಾಸ್ತ್ರಗಳ ಬಳಕೆಯ ಬಗ್ಗೆ ತರಬೇತಿಯನ್ನು ನೀಡಲಾಗುತ್ತದೆ. ಬಂದೂಕು ತರಬೇತಿ ಪಡೆಯಲು ಇಚ್ಚಿಸುವವರಿಗೆ ಅರ್ಜಿಗಳನ್ನು ಠಾಣೆಯಲ್ಲಿಯೇ ವಿತರಿಸಲಾಗುತ್ತದೆ.
ಸಾರ್ವಜನಿಕರು ಸ್ವತಹ ಬಂದೂಕು ಲೈಸೆನ್ಸ್ ಪಡೆಯಲು ಹಾಗೂ ಬಂದೂಕು ಪರವಾನಗಿ ನವೀಕರಣ ಮಾಡಿಸಿಕೊಳ್ಳಲು ಇಚ್ಛಿಸುವವರು ಈ ತರಬೇತಿಯನ್ನು ಪಡೆದು ಸದುಪಯೋಗಪಡಿಸಿಕೊಳ್ಳಲು ಪೊಲೀಸ್ ಇಲಾಖೆ ಕೋರಿದೆ.
ನಿಬಂಧನೆಗಳು:-
1. ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು.
2. ಅಭ್ಯರ್ಥಿಯು 21 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು ಮತ್ತು ಆರೋಗ್ಯವಂತರಾಗಿರಬೇಕು.
3. ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿರಬಾರದು.
4. ನಿಷೇಧಿತ ಶಸ್ತ್ರಾಸ್ತ್ರದೊಂದಿಗೆ ತರಬೇತಿ ನೀಡಲಾಗುವುದು.
-: ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು:-
1. ಅರ್ಜಿಯೊಂದಿಗೆ ಅಭ್ಯರ್ಥಿಗಳ 03 ಭಾವಚಿತ್ರಗಳನ್ನು ಕಡ್ಡಾಯವಾಗಿ ಒದಗಿಸಬೇಕು ಅದರಲ್ಲಿ ಒಂದು ಭಾವಚಿತ್ರವನ್ನು ಅರ್ಜಿಗೆ ಅಂಟಿಸಬೇಕು.
2. ಪ್ರಾಥಮಿಕ ವಿಚಾರಣೆ ನಡೆಸಿದ ನಂತರ ಅಂಚೆ ಕಚೇರಿಯಿಂದ ಅರ್ಜಿಯ ದೃಢೀಕರಣ.
3. ವೈದ್ಯಕೀಯ ಪ್ರಮಾಣಪತ್ರ ಕಡ್ಡಾಯವಾಗಿದೆ.
4. ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ನೀಡುವುದು.
ಮೇಲಿನ ನಿಗದಿತ ಷರತ್ತುಗಳು/ನಿಯಮಗಳನ್ನು ಪಾಲಿಸದಿದ್ದಲ್ಲಿ, ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ಠಾಣೆಗಳಿಂದ ಸ್ವೀಕರಿಸಲು ಮತ್ತು ದಿನಾಂಕ:29/06/2024 ರೊಳಗೆ ಮಾಹಿತಿಯನ್ನು ಕಡ್ಡಾಯವಾಗಿ ಈ ಕಚೇರಿಗೆ ಸಲ್ಲಿಸಲು ಕೋರಲಾಗಿದೆ. ತರಬೇತಿಯನ್ನು ದಿನಾಂಕ:01/07/2024 ರಿಂದ 07/07/2024 ರವರೆಗೆ ಆಯೋಜಿಸಲಾಗುವುದು.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…