ಜುಲೈ 15ರಂದು ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಕೋಲಾರ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಕೇಂದ್ರ ಲೋಕ ಸೇವಾ ಆಯೋಗ (UPSC)ಯಿಂದ ಅಧಿಸೂಚಿತವಾಗುವ ನಾಗರೀಕ ಸೇವಾ ಪರೀಕ್ಷೆಗಳು (Civil Services Exam, I.A.S) ಹಾಗೂ ಕರ್ನಾಟಕ ಲೋಕಸೇವಾ ಆಯೋಗ (KPSC) ಯಿಂದ ಅಧಿಸೂಚಿತವಾಗುವ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆ (KA.S) ಗಳ ಕುರಿತು ಜಾಗೃತಿ ಹಾಗೂ ಪ್ರೇರೇಪಣೆ ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಾಗಾರವು ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯ ಮೊದಲನೇ ಮಹಡಿಯಲ್ಲಿರುವ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಜರುಗಲಿದೆ.
ಕಾರ್ಯಾಗಾರದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಪರೀಕ್ಷೆಗಳ ಪಠ್ಯಕ್ರಮ, ತಯಾರಿ, ಪರೀಕ್ಷಾ ಹಂತಗಳು ಮುಂತಾದ ಎಲ್ಲಾ ವಿಷಯಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಒದಗಿಸಲಾಗುವುದು. ಈ ಕಾರ್ಯಾಗಾರದಲ್ಲಿ ಅಂತಿಮ ವರ್ಷ ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಹಾಗೂ ಪದವಿ ಪೂರೈಸಿರುವ ಆಸಕ್ತ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಪಾಲ್ಗೊಳ್ಳಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಮಾಹಿತಿಯನ್ನು ದಾಖಲಿಸಲು ಅಗತ್ಯವಾದ ನೋಟ್ ಬುಕ್ ಹಾಗೂ ಪೆನ್‌ನ್ನು ತರಬೇಕು, ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆ ಕಲ್ಪಿಸಲಾಗುವುದು. ಈ ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವ ಆಸಕ್ತಿಯುಳ್ಳ ಸ್ಪರ್ಧಾಕಾಂಕ್ಷಿಗಳು ಜಿಲ್ಲಾಡಳಿತದ ವತಿಯಿಂದ ಸೃಜಿಸಲಾದ ವೆಬ್‌ಸೈಟ್ ವಿಳಾಸ:http://kolar.nic.in/en/notice_category/annuouncements/ನಲ್ಲಿ ನೋಂದಾಯಿಸಿಕೊಳ್ಳಬಹುದು.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…