ಜುಲೈ 18 ರಂದು ಟೊಮೆಟೊ ಬೆಳೆಯಲ್ಲಿ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ ಕುರಿತು ರೈತರಿಗೆ ತರಬೇತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1050 ಹೆಕ್ಟೇರ್‌ಗಳಷ್ಟು ಪ್ರದೇಶದಲ್ಲಿ, ಟೊಮೆಟೊ ಬೆಳೆಯನ್ನು ಬೆಳೆಯುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಟೊಮೆಟೊ ಮಾರುಕಟ್ಟೆಗೆ ಪೂರೈಕೆ ಕಡಿಮೆಯಾಗಿರುವುದರಿಂದ ಬೆಲೆ ಹೆಚ್ಚಳವಾಗಿರುವುದು ಕಂಡು ಬಂದಿರುತ್ತದೆ.

ಬೆಳೆಯಲ್ಲಿ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ ಕುರಿತು ರೈತರಿಗೆ ಹೆಚ್ಚಿನ ಮಾಹಿತಿ ನೀಡುವ ಉದ್ದೇಶದಿಂದ 2023ರ ಜುಲೈ 18ರ ಮಂಗಳವಾರದಂದು ಬೆಳಗ್ಗೆ 10:30 ಗಂಟೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನ, ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಆದ್ದರಿಂದ ಆಸಕ್ತ ರೈತರು ತರಬೇತಿಯಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ.

ದೊಡ್ಡಬಳ್ಳಾಪುರ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ.ಸಂ.: 9880210892, ದೇವನಹಳ್ಳಿ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ.ಸಂ.: 9448825101, ಹೊಸಕೋಟೆ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ.ಸಂ.: 8217210320 ಹಾಗೂ ನೆಲಮಂಗಲ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ.ಸಂ.: 9880461607 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕ ಗುಣವಂತ.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *