ಜುಲೈ 19 ರಂದು ತೊಗರಿ ಸೊರಗು ರೋಗದ ಸಮಗ್ರ ನಿರ್ವಹಣೆಯ ಬಗ್ಗೆ ರೈತರಿಗೆ ರಾಜ್ಯಮಟ್ಟದ ಆನ್‌ಲೈನ್‌ ತರಬೇತಿ

ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿ ವಿಶ್ವವಿದ್ಯಾನಿಲಯಗಳು ರೈತರ ಕೃಷಿ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಧ್ಯೇಯೋದ್ದೇಶಗಳನ್ನು ಹೊಂದಿವೆ. ಈ ನಿಟ್ಟಿನಲ್ಲಿ ನಿರಂತರವಾಗಿ ತರಬೇತಿ ಕಾರ್ಯಕ್ರಮಗಳನ್ನು ಸ್ಥಳೀಯ ಮಟ್ಟದಲ್ಲಿ ಆಯೋಜನೆ.

ಕೋವಿಡ್-19 ಸಮಯದಲ್ಲಿಯೂ ಆನ್‌ಲೈನ್‌ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಮುಂದುವರೆಸಿಕೊಂಡು ಬಂದಿವೆ. ಕಾಲಕಾಲಕ್ಕೆ ರಾಜ್ಯಮಟ್ಟದ ರೈತರ ಕೃಷಿ ಸಮಸ್ಯೆಗಳನ್ನು ಗುರುತಿಸಿ ನಿರಂತರವಾಗಿ ಆನ್‌ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಹಣ ಮತ್ತು ಸಮಯ ಉಳಿತಾಯವಾಗುವುದರ ಜೊತೆಗೆ ಶೀಘ್ರವಾಗಿ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ.

ಸಮೇತಿ(ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ(ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ರಾಜ್ಯ ಮಟ್ಟದ ರೈತರ ಕೃಷಿ ಸಮಸ್ಯೆಗಳು ಮತ್ತು ಪರಿಹಾರ ಎಂಬ ವಿನೂತನ ಸರಣಿ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ.

ತೊಗರಿಯನ್ನು ಪ್ರಮುಖವಾಗಿ ಕಲುಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೀದರ್‍, ಬೆಂಗಳೂರು (ಗ್ರಾಮಾಂತರ) ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ. ತೊಗರಿಯನ್ನು ರಾಜ್ಯದಲ್ಲಿ 16.64 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ತೊಗರಿಗೆ ಬರುವ ಪ್ರಮುಖ ರೋಗವೆಂದರೆ ಸೊರಗು ರೋಗ ಅಥವಾ ನೆಟ್ಟಿ ರೋಗ, ಈ ರೋಗವು ಕಳೆದ ವರ್ಷ (2022-23) ತೊಗರಿ ಕಣಜ ಎಂದು ಹೆಸರು ಪಡೆದಿರುವ ಕಲುಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸುಮಾರು 0.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತುತ್ತಾಗಿತ್ತು.

ಈ ವರ್ಷವು ಸಹ ಬಿತ್ತನೆಯಾದ ತೊಗರಿ ಬೆಳೆಯು ಸೊರಗು ರೋಗಕ್ಕೆ ತುತ್ತಾಗುತ್ತಿದೆ. ಇದನ್ನು ಮನಗೊಂಡು ಮುಂಜಾಗ್ರತ ಕ್ರಮವಾಗಿ ಕೃಷಿ ಇಲಾಖೆ, ಸಮೇತಿ (ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ (ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ಜಂಟಿಯಾಗಿ ದಿನಾಂಕ:2023 ರ ಜುಲೈ 19 (ಬುಧವಾರ) ದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನೂತನ ಪ್ರಯತ್ನವಾಗಿ ಇದೇ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಆನ್‌ಲೈನ್‌ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ.

ಒಂದೇ ಸಲ 3 ಸಾವಿರ ತೊಗರಿ ಬೆಳೆಗಾರರು ಮತ್ತು ವಿಸ್ತರಣಾ ಕಾರ್ಯಕರ್ತರು ಭಾಗವಹಿಸಬಹುದು. ಆನ್ ಲೈನ್ ತರಬೇತಿಗೆ ಲಿಂಕ್https://zoom.us/i/929532558292pwd=TUVOVGZYTWJZMTdUSG5DNU1ScTQ1UT09 ಮತ್ತು ಪಾಸ್ ಕೋಡ್:123123, ನಮೂದಿಸಿ ತರಬೇತಿ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಯ ಸಿಬ್ಬಂದಿ/ಅಧಿಕಾರಿಗಳನ್ನು ಅಥವಾ ಮೊಬೈಲ್ ಸಂ:9481425522/ 95912128719964689340 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

3 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

7 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

10 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

11 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago