ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿ ವಿಶ್ವವಿದ್ಯಾನಿಲಯಗಳು ರೈತರ ಕೃಷಿ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಧ್ಯೇಯೋದ್ದೇಶಗಳನ್ನು ಹೊಂದಿವೆ. ಈ ನಿಟ್ಟಿನಲ್ಲಿ ನಿರಂತರವಾಗಿ ತರಬೇತಿ ಕಾರ್ಯಕ್ರಮಗಳನ್ನು ಸ್ಥಳೀಯ ಮಟ್ಟದಲ್ಲಿ ಆಯೋಜನೆ.
ಕೋವಿಡ್-19 ಸಮಯದಲ್ಲಿಯೂ ಆನ್‌ಲೈನ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಮುಂದುವರೆಸಿಕೊಂಡು ಬಂದಿವೆ. ಕಾಲಕಾಲಕ್ಕೆ ರಾಜ್ಯಮಟ್ಟದ ರೈತರ ಕೃಷಿ ಸಮಸ್ಯೆಗಳನ್ನು ಗುರುತಿಸಿ ನಿರಂತರವಾಗಿ ಆನ್‌ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಹಣ ಮತ್ತು ಸಮಯ ಉಳಿತಾಯವಾಗುವುದರ ಜೊತೆಗೆ ಶೀಘ್ರವಾಗಿ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ.
ಸಮೇತಿ(ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ(ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ರಾಜ್ಯ ಮಟ್ಟದ ರೈತರ ಕೃಷಿ ಸಮಸ್ಯೆಗಳು ಮತ್ತು ಪರಿಹಾರ ಎಂಬ ವಿನೂತನ ಸರಣಿ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ.
ತೊಗರಿಯನ್ನು ಪ್ರಮುಖವಾಗಿ ಕಲುಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೀದರ್, ಬೆಂಗಳೂರು (ಗ್ರಾಮಾಂತರ) ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ. ತೊಗರಿಯನ್ನು ರಾಜ್ಯದಲ್ಲಿ 16.64 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ತೊಗರಿಗೆ ಬರುವ ಪ್ರಮುಖ ರೋಗವೆಂದರೆ ಸೊರಗು ರೋಗ ಅಥವಾ ನೆಟ್ಟಿ ರೋಗ, ಈ ರೋಗವು ಕಳೆದ ವರ್ಷ (2022-23) ತೊಗರಿ ಕಣಜ ಎಂದು ಹೆಸರು ಪಡೆದಿರುವ ಕಲುಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸುಮಾರು 0.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತುತ್ತಾಗಿತ್ತು.
ಈ ವರ್ಷವು ಸಹ ಬಿತ್ತನೆಯಾದ ತೊಗರಿ ಬೆಳೆಯು ಸೊರಗು ರೋಗಕ್ಕೆ ತುತ್ತಾಗುತ್ತಿದೆ. ಇದನ್ನು ಮನಗೊಂಡು ಮುಂಜಾಗ್ರತ ಕ್ರಮವಾಗಿ ಕೃಷಿ ಇಲಾಖೆ, ಸಮೇತಿ (ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ (ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ಜಂಟಿಯಾಗಿ ದಿನಾಂಕ:2023 ರ ಜುಲೈ 19 (ಬುಧವಾರ) ದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನೂತನ ಪ್ರಯತ್ನವಾಗಿ ಇದೇ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಆನ್‌ಲೈನ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ.
ಒಂದೇ ಸಲ 3 ಸಾವಿರ ತೊಗರಿ ಬೆಳೆಗಾರರು ಮತ್ತು ವಿಸ್ತರಣಾ ಕಾರ್ಯಕರ್ತರು ಭಾಗವಹಿಸಬಹುದು. ಆನ್ ಲೈನ್ ತರಬೇತಿಗೆ ಲಿಂಕ್https://zoom.us/i/929532558292pwd=TUVOVGZYTWJZMTdUSG5DNU1ScTQ1UT09 ಮತ್ತು ಪಾಸ್ ಕೋಡ್:123123, ನಮೂದಿಸಿ ತರಬೇತಿ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಯ ಸಿಬ್ಬಂದಿ/ಅಧಿಕಾರಿಗಳನ್ನು ಅಥವಾ ಮೊಬೈಲ್ ಸಂ:9481425522/ 9591212871/ 9964689340 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…