ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನ್ಯಾಯಾಲಯ ಆವರಣಗಳಲ್ಲಿ ಜುಲೈ 8 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಬೃಹತ್ ಲೋಕ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಎಲ್ ರಘುನಾಥ್ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್‌ಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಲಮಹಡಿ ಸಿಟಿ ಸಿವಿಲ್ ನ್ಯಾಯಾಲಯದ ಕೊಠಡಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ವ್ಯಾಜ್ಯ ಪೂರ್ವ ಪ್ರಕರಣಗಳಾದಂತಹ ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳಿಗೆ ಸಂಬಂಧಿಸಿದ ಹಾಗೂ ವೈವಾಹಿಕ, ಕುಟುಂಬ ನ್ಯಾಯಾಲಯ ಇತರೆ ಸಿವಿಲ್ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜೀಯಾಗಬಲ್ಲ ಅಪರಾಧ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ, ಭೂಸ್ವಾಧೀನ, ಕಂದಾಯ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಬಾಡಿಗೆ, ಬೋಗ್ಯ ಹಕ್ಕುಗಳಂತಹ ಪ್ರಕರಣಗಳು ಲೋಕ ಅದಾಲತ್‌ನಲ್ಲಿ ಇತ್ಯರ್ಥವಾಗಲಿವೆ ಎಂದು ಮಾಹಿತಿ ನೀಡಿದರು.
ಕಳೆದ ಬಾರಿ ಎರಡು ಲಕ್ಷ ಪ್ರಕರಣಗಳು ಲೋಕ ಅದಾಲತ್‌ನಲ್ಲಿ ನೊಂದಾಯಿಸಲ್ಪಟ್ಟಿದ್ದು, ಸುಮಾರು ಒಂದು ಲಕ್ಷ ಎಪ್ಪತ್ತೊಂಬತ್ತು ಸಾವಿರದಷ್ಟು ಪ್ರಕರಣಗಳು ಇತ್ಯರ್ಥಗೊಂಡಿದ್ದವು. ಈ ಬಾರಿ ಸುಮಾರು 2 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಿರುವುದಾಗಿ ತಿಳಿಸಿದರು.
ಸಾರ್ವಜನಿಕರು ಲೋಕ ಅದಾಲತ್‌ನ್ನು ಸದುಪಯೋಗ ಪಡಿಸಿಕೊಂಡು ಹಣ ಸಮಯ ಎರಡನ್ನು ಉಳಿತಾಯ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 080-22222919 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಅವರು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ್ ಸಾಲಿಯಾನ್ ಉಪಸ್ಥಿತರಿದ್ದರು.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…