ದೊಡ್ಡಬಳ್ಳಾಪುರ(ತೂಬಗೆರೆ): ತಾಲೂಕಿನ ತೂಬಗೆರೆ ಗ್ರಾಮದಲ್ಲಿ 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಆಚರಣೆ ಭೂತ ನೆರಿಗೆ ಇದೇ ಜು.18 ರ ಗುರುವಾರ ಮಧ್ಯಾಹ್ನ 3 ಗಂಟೆಗೆ ನಡೆಸಲು ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಾಲಯಲ್ಲಿ ಭೂತ ನೆರಿಗೆ ಆಚರಣಾ ಸಮಿತಿ ಸಭೆ ನೆಡೆಸಿ ತೀರ್ಮಾನಿಸಲಾಯಿತು.
ಪ್ರತಿವರ್ಷದಂತೆ ಈ ವರ್ಷವೂ ಸಹ ಆಷಾಢ ಮಾಸದ ಏಕಾದಶಿಯಾದ ಮಾರನೇ ದಿನವಾದ ದ್ವಾದಶಿಯಂದು ಭೂತ ನೆರಿಗೆ ಹಬ್ಬವನ್ನು ಆಚರಿಸಲು ಸಜ್ಜಾಗಿದ್ದಾರೆ.
ಕರಿಯಣ್ಣ – ಕೆಂಚಣ್ಣರ ವೇಷಧಾರಿಯಾದವರ ಮೇಲೆ ಭೂತ ಆಹ್ವಾನಿಸಿ, ಆರ್ಭಟಿಸುತ್ತವೆ. ಈ ವೇಳೆ, ಇವರ ಹಸಿವು ತಣಿಸುವ ಕೆಲಸ ಆಗುತ್ತದೆ. ವೇಷಧಾರಿಗಳು ಮನೆಗೆ ಬಂದರೆ ಮನೆಯಲ್ಲಿನ ದ್ವೆವ್ವ ಪಿಶಾಚಿಗಳು ಓಡಿ ಹೋಗುತ್ತವೆ ಎಂಬ ನಂಬಿಕೆಯೂ ಇದೆ.
ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಭೂತ ನೆರಿಗೆ ಆಚರಣಾ ಸಮಿತಿಯ ಚಿದಾನಂದ ಗುರೂಜಿ, ವಿಷ್ಣುವಿನ ದ್ವಾರಪಾಲಕರಾದ ಜಯ-ವಿಜಯರು ಶಾಪಕ್ಕೆ ಗುರಿಯಾಗಿ ಕಲಿಯುಗದಲ್ಲಿ ಕರಿಯಣ್ಣ ಕೆಂಚಣ್ಣರಾಗಿ ಭೂಲೋಕಕ್ಕೆ ಬರುತ್ತಾರೆ ಎಂಬ ಐತಿಹಾಸಿಕ ಹಿನ್ನೆಲೆ ಇದೆ. ಸುಮಾರು ಐದು ನೂರು ವರ್ಷಗಳ ಇತಿಹಾಸವಿರುವ ಈ ಭೂತನೆರಿಗೆ ಹಬ್ಬ ಇಂದಿಗೂ ಸಹ ತೂಬಗೆರೆ ಹಾಗೂ ಕಲ್ಲುಕೋಟೆ ಗ್ರಾಮದಲ್ಲಿ ನಡೆದುಕೊಂಡು ಬರುತ್ತಿದೆ. ಭೂತನೆರಿಗೆ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣ ವೇಷಧಾರಿಗಳು ಒಂದು ಕೈಯಲ್ಲಿ ಭೂತದ ಮುಖ ಹೋಲುವ ವರ್ತುಲಾಕಾರದ ನೆರಿಗೆ ಹಿಡಿದಿರುತ್ತಾರೆ. ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದಿರುತ್ತಾರೆ. ಲಕ್ಷ್ಮಿನರಸಿಂಹಸ್ವಾಮಿ ಭಕ್ತರು ಕೆಂಚಣ್ಣ-ಕರಿಯಣ್ಣರ ಮುಂದೆ ವಿಷ್ಣುವಿನ ನಾಮಸ್ಮರಣೆ ಮತ್ತು ಗುಣಗಾನ ಮಾಡುತ್ತಾ ಇವರನ್ನು ಕೆಣಕುತ್ತಾರೆ. ವಿಷ್ಣುವಿನ ನಾಮಸ್ಮರಣೆ ಸಹಿಸದ ಈ ಕರಿಯಣ್ಣ ಮತ್ತು ಕೆಂಚಣ್ಣ ಭಕ್ತರ ಮೇಲೆ ಕೋಪಗೊಂಡು ಅವರೆಡೆಗೆ ನುಗ್ಗುತ್ತಾರೆ. ಕೋಪಗೊಂಡ ಕರಿಯಣ್ಣ ಕೆಂಚಣ್ಣರನ್ನು ಸಮಾಧಾನ ಮಾಡಲು ಇತರರು ಅವರ ಬಾಯಿಗೆ ಬಾಳೆ ಹಣ್ಣಿನ, ಹಲಸಿನ ಹಣ್ಣಿನಿಂದ ತಯಾರಿಸಿದ ರಸಾಯನವನ್ನು ತಿನ್ನಿಸುತ್ತಾರೆ. ಆವೇಶಕ್ಕೆ ಒಳಗಾದ ಈ ಭೂತಗಳು ಆ ಸಂದರ್ಭದಲ್ಲಿ ಏನು ಕೊಟ್ಟರೂ ತಿನ್ನುತ್ತಾರೆ ಎಂಬುದು ಜಾನಪದರ ನಂಬಿಕೆ ಇದೆ ಎಂದರು.
ಕೆಲವು ಗ್ರಾಮಗಳಲ್ಲಿ ನಡೆಯುವ ಈ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣರ ಬಾಯಿಗೆ ಕುರಿ-ಕೋಳಿಗಳನ್ನು ನೀಡುತ್ತಾರೆ. ಇವುಗಳ ರಕ್ತ ಹೀರುವುದರೊಂದಿಗೆ ಕರಿಯಣ್ಣ-ಕೆಂಚಣ್ಣ ಶಾಂತರಾಗುತಾರೆ ಎನ್ನುವುದು ಈ ಭಾಗದ ಭಕ್ತರ ನಂಬಿಕೆ ಆದ್ದರಿಂದ ತೂಬಗೆರೆ ಸುತ್ತ ಮುತ್ತಲಿನ ಸಕಲ ಆಸ್ತಿಕರು ಈ ಆಚರಣೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…