ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ ಹಾಗೂ ಗ್ರಾಮೀಣ ಭಾಗಗಳ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
66/11 ಕೆವಿ ತಾಪಸೀಪುರ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಫ್-01 ಪ್ರಗತಿ ಹಾಗೂ ಎಫ್-02 ತಾಪಸೀಪುರ ಫೀಡರ್‌ಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತದೆ. ಈ ಅವಧಿಯಲ್ಲಿ ಸಂಬಂಧಿತ ಪ್ರದೇಶಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಗಂಟಿಗಾನಹಳ್ಳಿ, ಕಾವಲಹಳ್ಳಿ, ಮಾರಹಳ್ಳಿ, ಭೈರೇನಹಳ್ಳಿ, ಮೆಳೇಕೋಟೆ, ಚಿಕ್ಕರಾಯಪ್ಪನಹಳ್ಳಿ, ದೊಡ್ಡರಾಯಪ್ಪನಹಳ್ಳಿ, ಸಾಧುಮಠ, ಸೋಣ್ಣಾಪುರ, ಚೌಗೊಂಡನಹಳ್ಳಿ, ಮುಕ್ಕೇನಹಳ್ಳಿ, ಮೆಳೇಕೋಟೆ ಕ್ರಾಸ್, ಊದನಹಳ್ಳಿ, ಹೆಗ್ಗಡಿಹಳ್ಳಿ, ಕಣಿವೆಪುರ, ಸೋಣ್ಣಮಾರನಹಳ್ಳಿ, ಮಾಚಗೊಂಡನಹಳ್ಳಿ, ಗೂಳ್ಯ, ನಂಬಿಗುಂದ, ದಂಡುದಾಸಕೊಡಿಗೇಹಳ್ಳಿ, ವಾಸುದೇವನಹಳ್ಳಿ, ಕುರುಬರಹಳ್ಳಿ, ಸೀಗೇಹಳ್ಳಿ ಹಾಗೂ ಚನ್ನಾಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…