ಜು.25ರಿಂದ ತಾಲೂಕು ಕಚೇರಿ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭ- ಕೆರೆ ಸಂರಕ್ಷಣೆ ಹೋರಾಟ ಸಮಿತಿ ಮುಖಂಡ ವಸಂತ್ ಹೇಳಿಕೆ

ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ‌ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ ಇತರೆ ತ್ಯಾಜ್ಯ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಒಡಲು ಸೇರಿ ಸಂಪೂರ್ಣ ಕಲುಷಿತಗೊಂಡಿವೆ.

ಈ ಕೆರೆಗಳ ನೀರನ್ನು ಬಳಿಸಿದ ಜನ ರೋಗಪೀಡಿತರಾಗುತ್ತಿದ್ದಾರೆ. ಪ್ರಾಣಿ ಪಕ್ಷಿಗಳು, ಜಲಚರಗಳು ಸಾವನ್ನಪ್ಪುತ್ತಿವೆ. ಆದ್ದರಿಂದ ಕೆರೆ ಸಂರಕ್ಷಣೆಗೆ, ಕೆರೆ ಶುದ್ಧೀಕರಣಕ್ಕೆ ಈಗಾಗಲೇ ಹಲವು ಮನವಿ, ಹೋರಾಟ, ಪ್ರತಿಭಟನೆ ಸೇರಿದಂತೆ ನಾನಾ ಪ್ರಯತ್ನ ಮಾಡಿದರೂ ಸಮಸ್ಯೆ ಬಗೆಹರಿಯಲಿಲ್ಲ. ಆದರೆ ಗ್ರಾಮಸ್ಥರು ಮತ್ತು ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಸಮಿತಿ ಮುಖಂಡರು ಪಟ್ಟು ಬಿಡದೇ ಕೆರೆ ಶುದ್ದೀಕರಣ, ಸಂರಕ್ಷಣೆಗೆ ಹೋರಾಟ ಮುಂದುವರಿಸಿದ್ದಾರೆ.

ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಸೇರುತ್ತಿರುವ ಕೊಳಚೆ ನೀರಿಗೆ ಕಡಿವಾಣ ಹಾಕಲು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಸದಸ್ಯರು ನಿರ್ಧರಿಸಿದ್ದು, ಕೊಳಚೆ ನೀರು ಹರಿದು ಬರುವ ಕಾಲುವೆಯನ್ನು ಕಲ್ಲು, ಮಣ್ಣು ತುಂಬಿ ಮುಚ್ಚುವುದಾಗಿ ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದ್ದರು. ಆದರೆ ಪೊಲೀಸ್ ಇಲಾಖೆಯಿಂದ ಅನುಮತಿ ದೊರೆಯದ ಕಾರಣ ಜು.25ರ ಬೆಳಗ್ಗೆ 6ರಿಂದ  ದೊಡ್ಡಬಳ್ಳಾಪುರ ನಗರದ ತಾಲೂಕು‌ ಕಚೇರಿ ಮುಂಭಾಗ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡಲು ಸಿದ್ಧತೆ ಕೈಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಕೆರೆ ಸಂರಕ್ಷಣೆ ಹೋರಾಟ ಸಮಿತಿ ಮುಖಂಡ ವಸಂತ್ ಮಾತನಾಡಿ, 10 ವರ್ಷಗಳಿಂದ ಕೆರೆಗಳ ಉಳಿವುಗಾಗಿ ವಿವಿಧ ಹೋರಾಟ ನಡೆಸಿಕೊಂಡು ಬಂದರು ನಮ್ಮ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ, ಶುದ್ಧ ಕುಡಿಯುವ ನೀರು ಕೊಟ್ಟಿಲ್ಲ. ಈವರೆಗೆ ಅಧಿಕಾರಕ್ಕೆ ಬಂದಿರುವ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳು ಭರವಸೆಯಲ್ಲೇ ಕಾಲಕಳೆದಿದ್ದಾರೆ. ಯಾವ ಭರವಸೆಯು ಕಾರ್ಯರೂಪಕ್ಕೆ ಬಂದಿಲ್ಲ. ನಮ್ಮ ಭಾಗದ ಎಲ್ಲಾ ಕೆರೆಗಳು ಸಂಪೂರ್ಣ ಕಲುಷಿತಗೊಂಡಿವೆ. ಕೊಳವೆ ಬಾವಿಗಳಲ್ಲಿ ಬರುತ್ತಿರುವ ಕುಡಿಯುವ ನೀರು ಯೋಗ್ಯವಾಗಿಲ್ಲ. ಮಜರಾಹೊಸಹಳ್ಳಿ, ದೊಡ್ಡತುಮಕೂರು ಸೇರಿದಂತೆ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಕೊಳಚೆ ನೀರನ್ನು ಶುದ್ದೀಕರಿಸಿ ಬಿಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಹೀಗಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಶೀಘ್ರವಾಗಿ ಇದಕ್ಕೆ ಕಾರಣವಾಗಿರುವವರ ಸೂಕ್ತ ಕಾನೂನು ಕ್ರಮ ಕೈಗೊಂಡು ಕೆರೆಗಳ ಶುದ್ದೀಕರಣ ಕೆಲಸ ಮಾಡಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಚ್ಚರಿಸಿದರು.

ಈ ಹಿಂದೆ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು. ಈ ಸಮಯದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಗಳಲ್ಲಿ ಸಭೆ ನಡೆಸಿ ನೀಡಲಾಗಿದ್ದ ಯಾವುದೇ ಭರವಸೆಯು ಇದುವರೆಗೂ ಈಡೇರಿಲ್ಲ. ನಮ್ಮ ಭಾಗದಲ್ಲಿ ತಿಂಗಳಿಗೆ ಎರಡು‌ ಮೂರು ಸಾವುಗಳು ಆಗುತ್ತಿವೆ. ಈ ಸಾವು ಸಹಜವಾಗಿ ಬರುತ್ತಿಲ್ಲ. ಬದಲಿಗೆ ಕಿಡ್ನಿ‌ ಸಮಸ್ಯೆ, ಕ್ಯಾನ್ಸರ್, ಶ್ವಾಸಕೋಶ ಸಮಸ್ಯೆ ಸೇರಿದಂತೆ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿ ಅಕಾಲಿಕ ಮರಣ ಹೊಂದುತ್ತಿದ್ದಾರೆ. ಇದಕ್ಕೆ ಕಾರಣ ಅಶುದ್ಧ ಕುಡಿಯುವ ನೀರಿನಿಂದ, ಕೆರೆಗಳ ಮಾಲಿನ್ಯದಿಂದ ಎಂದರು.

ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ದೊಡ್ಡಬಳ್ಳಾಪುರದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಿಯ ಕಚೇರಿಯನ್ನು ನಗರಕ್ಕೆ ಸ್ಥಳಾಂತರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉರುಳು ಸೇವೆ ಮಾಡಿದರು ಇದುವರೆಗೂ ಸ್ಥಳಾಂತರ ಆಗಿಲ್ಲ. ಇಂತಹ ಕನಿಷ್ಠ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವಲ್ಲೂ ಸಹ ಜನಪ್ರತಿನಿಧಿಗಳು, ಜಿಲ್ಲಾಡಳಿತ ವಿಫಲವಾಗಿದೆ. ಈ ಎಲ್ಲಾ ಕಾರಣದಿಂದ ಇದೇ ಜು.25ರಂದು ತಾಲೂಕು ಕಚೇರಿ ಎದುರು ಅಮರಣಾಂತ ಉಪವಾಸ ಕೈಗೊಂಡಿದ್ದೇವೆ ಎಂದರು.

ದೊಡ್ಡಬಳ್ಳಾಪುರ ನಗರಸಭೆ ಯುಜಿಡಿ‌ ನೀರು, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ‌ ಯುಜಿಡಿ ನೀರು ಮೂರನೇ ಹಂತದಲ್ಲಿ ಶುದ್ಧೀಕರಣಗೊಂಡು ಕೆರೆಗಳಿಗೆ ಬರುವಂತೆ ಮಾಡಬೇಕು. ಅಂರ್ಜಲ ಹದಗೆಡದೇ ಇರುವ ಭಾಗದಿಂದ ಜನರಿಗೆ ಶುದ್ಧ ಕುಡಿಯುವ ನೀರು, ಜನ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಬೇಕು. ಮಳೆ ನೀರು ಕೊಯ್ಲು ವ್ಯವಸ್ಥೆ ಮಾಡಬೇಕು. ಕೈಗಾರಿಕಾ ಪ್ರದೇಶದಲ್ಲಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕ ಸ್ಥಾಪನೆ ಮಾಡಿ, ಕೈಗಾರಿಕೆಗಳ ತ್ಯಾಜ್ಯ ನೀರನ್ನು ಶುದ್ಧೀಕರಿಸಿಕೊಂಡು ಅವರೇ ಆ ನೀರನ್ನು ಕೆರೆಗಳಿಗೆ ಬಿಡದೇ ಮರುಬಳಿಕೆ‌ ಮಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಈ ಎಲ್ಲಾ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸಮಿತಿ ಹೋರಾಟಗಾರರು ಎಚ್ಚರಿಸಿದ್ದಾರೆ.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

5 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

6 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

7 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

17 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

17 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

20 hours ago