ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಸರ್ಕಾರದ ಸಾಧನೆಗಳ ದಾಖಲೆ ಕಣ್ಣ ಮುಂದಿದೆ. ವಿರೋಧ ಪಕ್ಷಗಳು ಸರ್ಕಾರದ ಬಗ್ಗೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಈ ಎಲ್ಲಾ ದಾಖಲೆಗಳು ಕಣ್ಣ ಮುಂದಿವೆ. ಆದರೂ ವಿರೋಧ ಪಕ್ಷಗಳು ಸುಳ್ಳು ಹೇಳುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ
ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರು ಸೇರಿದಂತೆ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಆಚರಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಜತೆಗೆ ಸಮಾಜದ ಎಲ್ಲಾ ವರ್ಗದ ಬಡ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ನಾವು ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ ಎಂದು ಹೇಳಿದ್ದಾರೆ.
ಬಸ್ ಪ್ರಯಾಣಿಕರಲ್ಲಿ ಶೇ55 ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಇದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇವರಲ್ಲಿ 1 ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ. ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ. ಜೊತೆಗೆ ಕೋಟಿ ಕೋಟಿ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಕೆಲವರಿಗೆ ಹೊಟ್ಟೆಯುರಿ ಎಂದಿದ್ದಾರೆ.
ಬಡವರ ಕೈಯಲ್ಲಿ ದುಡ್ಡು ಇರಬೇಕು ಎನ್ನುವುದು ನಮ್ಮ ಗುರಿ. ಹಣ ಇದ್ದರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಈ ಚೈತನ್ಯ ತುಂಬುವ ಕಾರ್ಯಕ್ರಮವನ್ನು ನಾವು ಘೋಷಿಸಿ, ಸಾಧಿಸಿ ತೋರಿಸಿದ್ದೀವಿ. ಜನರಿಗೆ ನಾವು ಕೊಟ್ಟ ಹಣ ವಾಪಾಸ್ ಸರ್ಕಾರಕ್ಕೇ ಬರುತ್ತದೆ. ನಾವು ಪುನಃ ಜನರ ಜೇಬಿಗೆ ಅದೇ ಹಣವನ್ನು ಹಾಕುತ್ತೇವೆ. ಇದರಿಂದ ಜಿಡಿಪಿ, ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ ಎಂದರು.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…