Categories: ರಾಜ್ಯ

ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ: ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ

ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಸರ್ಕಾರದ ಸಾಧನೆಗಳ ದಾಖಲೆ ಕಣ್ಣ ಮುಂದಿದೆ. ವಿರೋಧ ಪಕ್ಷಗಳು ಸರ್ಕಾರದ ಬಗ್ಗೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು.‌ ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಈ ಎಲ್ಲಾ ದಾಖಲೆಗಳು ಕಣ್ಣ ಮುಂದಿವೆ. ಆದರೂ ವಿರೋಧ ಪಕ್ಷಗಳು ಸುಳ್ಳು ಹೇಳುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ

ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರು ಸೇರಿದಂತೆ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಆಚರಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಜತೆಗೆ ಸಮಾಜದ ಎಲ್ಲಾ ವರ್ಗದ ಬಡ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ನಾವು ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ ಎಂದು ಹೇಳಿದ್ದಾರೆ.

ಬಸ್ ಪ್ರಯಾಣಿಕರಲ್ಲಿ ಶೇ55 ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಇದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇವರಲ್ಲಿ 1 ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ. ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ. ಜೊತೆಗೆ ಕೋಟಿ ಕೋಟಿ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಕೆಲವರಿಗೆ ಹೊಟ್ಟೆಯುರಿ ಎಂದಿದ್ದಾರೆ.

ಬಡವರ ಕೈಯಲ್ಲಿ ದುಡ್ಡು ಇರಬೇಕು ಎನ್ನುವುದು ನಮ್ಮ ಗುರಿ. ಹಣ ಇದ್ದರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಈ ಚೈತನ್ಯ ತುಂಬುವ ಕಾರ್ಯಕ್ರಮವನ್ನು ನಾವು ಘೋಷಿಸಿ, ಸಾಧಿಸಿ ತೋರಿಸಿದ್ದೀವಿ.  ಜನರಿಗೆ ನಾವು ಕೊಟ್ಟ ಹಣ ವಾಪಾಸ್ ಸರ್ಕಾರಕ್ಕೇ ಬರುತ್ತದೆ. ನಾವು ಪುನಃ ಜನರ ಜೇಬಿಗೆ ಅದೇ ಹಣವನ್ನು ಹಾಕುತ್ತೇವೆ. ಇದರಿಂದ ಜಿಡಿಪಿ, ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ ಎಂದರು.

Ramesh Babu

Journalist

Recent Posts

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

36 minutes ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

6 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

20 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago