ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ 2023-24 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭವು ಜೂನ್ 21(ಶುಕ್ರವಾರ) ರಂದು ಹೊಸಕೋಟೆಯ ಶ್ರೀ ಚನ್ನಭೈರೇಗೌಡ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ನೆರವೇರಿಸಲಿದ್ದಾರೆ.
ಘನ ಉಪಸ್ಥಿತಿಯಲ್ಲಿ ಕರ್ನಾಟಕ ಸರ್ಕಾರದ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ವಹಿಸಿಕೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ.ಸುಧಾಕರ್, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ನೆಲಮಂಗಲ ಶಾಸಕ ಎನ್.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ರವಿ, ಪುಟ್ಟಣ್ಣ, ಎನ್.ನಾಗರಾಜು(ಎಂ.ಟಿ.ಬಿ), ರಾಮೋಜಿಗೌಡ, ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಲ್ಮಾಕೆ.ಫಾಹಿಂ, ಹೊಸಕೋಟೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಕೇಶವಮೂರ್ತಿ ಎನ್ ಉಪಸ್ತಿತರಿರುವರು.
ವಿಶೇಷ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿ, ರಾಜ್ಯ ಉಪಾಧ್ಯಕ್ಷರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ಹೆಚ್.ಬಾಲಕೃಷ್ಣ ಹಾಗೂ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಮಾಧ್ಯಮ ಮತ್ತು ಪತ್ರಿಕಾ ಪ್ರತಿನಿಧಿಗಳು ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಮುಖಂಡರುಗಳು ಮತ್ತು ಸಾರ್ವಜನಿಕರು ಉಪಸ್ತಿತಿರಿರುತ್ತಾರೆ.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ.ಎನ್ ಶಿವಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಮಲ್ಲಿಕಾರ್ಜುನ ಬಾಲದಂಡಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಗೌರವಾಧ್ಯಕ್ಷ ಮುನಿಶಾಮಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಟಿ.ಜಯಲಕ್ಷ್ಮಿ, ಹೊಸಕೋಟೆ ತಾಲ್ಲೂಕು ತಹಶೀಲ್ದಾರ ಎಂ.ವಿಜಯಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಅರುಳ್ ಸಂತೋಷ್, ಖಜಾಂಚಿ ಮೊಹಮ್ಮದ್ ಮುಜಾಮೀರ್, ಪ್ರಧಾನ ಕಾರ್ಯದರ್ಶಿ ಪಿ.ಗಂಗಾಧರಪ್ಪ, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಲಕ್ಷ್ಮಿ ನರಸಿಂಹಯ್ಯ ಎನ್, ನೆಲಮಂಗಲ ತಾಲ್ಲೂಕು ಅದ್ಯಕ್ಷ ವಾಸುದೇವ ಮೂರ್ತಿ, ಹಿರಿಯ ಉಪಾಧ್ಯಕ್ಷ ರವಿಶಂಕರ ಉಪಸ್ತಿತರಿರುವರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…