ಜೂನ್ 25ರ ದೇವನಹಳ್ಳಿ ಚಲೋಗೆ ಬೆಂಬಲಿಸಿ ಜನತಾಪಕ್ಷದ ವತಿಯಿಂದ ಸಂಪೂರ್ಣ ಬೆಂಬಲ

ದೇವನಹಳ್ಳಿ: ಪಟ್ಟಣದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಜನತಾಪಕ್ಷದ ವತಿಯಿಂದ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಇದೇ ಜೂನ್ 25ರ ದೇವನಹಳ್ಳಿ ಚಲೋಗೆ ಬೆಂಬಲಿಸಿ ಪತ್ರಿಕಾಗೋಷ್ಟಿ ನಡೆಸಿದರು.

ಈ ವೇಳೆಯಲ್ಲಿ ಜನತಾ ಪಕ್ಷದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ನಾಗೇಶ್. ಎನ್ ಮಾತನಾಡಿ ರಾಜ್ಯದಲ್ಲಿ ಮೌಲ್ಯಧಾರಿತ ಆಡಳಿತ ತರುವ ಉದ್ದೇಶದೊಂದಿಗೆ ಜನತಾ ಪಕ್ಷವು ಮತ್ತೆ ಸಕ್ರಿಯವಾಗಿ ಸಂಘಟನೆಯಲ್ಲಿ ತೊಡಗಿದ್ದೇವೆ.

ರಾಜ್ಯದಲ್ಲಿ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ನಿರಂತರ ಹೋರಾಟವು ಇತಿಹಾಸ ಸೃಷ್ಟಿಸಿರುವ ಹೋರಾಟವಾಗಿದೆ. ಸ್ಥಳೀಯ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ,ಅವರ ಸಮಸ್ಯೆಗಳನ್ನು ಲೆಕ್ಕಿಸದೆ ಅಭಿವೃದ್ಧಿಯ ಹೆಸರಲ್ಲಿ ಕೃಷಿ ಭೂಮಿಯನ್ನು ನಾಶ ಮಾಡುತ್ತಿರುವುದು ಸಮಂಜಸವಲ್ಲ ಅನ್ಯ ಜಿಲ್ಲೆಗಳಲ್ಲಿ ಕೃಷಿಗೆ ಯೋಗ್ಯವಲ್ಲದ ಬರಡು ಭೂಮಿಯನ್ನು ಬಳಸಿಕೊಳ್ಳಿ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

“ರೈತರ ಹೋರಾಟ ದೇಶದ ಉಳಿವಿಗಾಗಿ “ರೈತರ ವಿಷಯದಲ್ಲಿ ಎಲ್ಲಾ ಪಕ್ಷಗಳು ಒಂದೇ ಹಾಗಾಗಿ ರಾಜಕೀಯ ವ್ಯಕ್ತಿಗಳನ್ನ ನಂಬಿ ಮೋಸ ಹೋಗಿದ್ದು ಸಾಕು ರೈತರು ತಿರುಗಿ ಬಿದ್ದರೆ ಅವರ ಸ್ಥಿತಿ ಹೇಗಿರುತ್ತದೆ ಎಂದು ಭವಿಷ್ಯದಲ್ಲಿ ತಿಳಿಸಲಾಗುತ್ತದೆ ಹಾಗೂ ಪ್ರಜಾಪ್ರಭುತ್ವದಲ್ಲಿ ಕಾರ್ಪೊರೇಟ್ ವ್ಯಕ್ತಿಗಳಿಗಾಗಿ ಆಡಳಿತ ನಡೆಸಲಾಗುತ್ತಿದೆ ಕೈಗಾರಿಕೆಗಳನ್ನು ಫಲವತ್ತಾದ ಭೂಮಿಯಲ್ಲಿ ಮಾಡಲು ಹೊರಟಿರುವುದು ಮೂರ್ಖರ ನಿರ್ಧಾರ. ನೆಲೆ ಇಲ್ಲದೆ ಕೃಷಿ ಅಭಿವೃದ್ಧಿ ಹೇಗೆ ಸಾಧ್ಯ ,ರಾಜಕಾರಣಿಗಳು ಕಾರ್ಪೊರೇಟ್ ಕಂಪೆನಿಗಳಿಗಾಗಿ ಭೂಮಿ ಒದಗಿಸಿ ತೆರಿಗೆ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ ಎಂದು ಅಗ್ರಹಿಸಿದರು.

ಇಂದಿಗೂ ರೈತರು ಆತ್ಮಹತ್ಯೆ ನಿಂತಿಲ್ಲ ಕಾರಣ ಹಲವಾರು ಭೂಮಿ ರಕ್ಷಣೆಗಾಗಿ ಸರ್ಕಾರ ಮೊರೆ ಹೋದಲ್ಲಿ ರಕ್ಷಿಸಬೇಕಾದ ಸರ್ಕಾರವೇ ಭೂಸ್ವಾಧೀನ ಮಾಡಲು ಹೊರಟರೆ ಹೊಣೆ ಯಾರು ಹಾಗೂ ರೈತರ ಮೇಲೆ ಗುಂಡಿನ ದಾಳಿ ಎಂತಹ ಪರಿಸ್ಥಿತಿ ಲೂಟಿಕೋರರು ದರೋಡೆಕೋರರು, ಕೊಲೆಗಾರರು ಆರಾಮವಾಗಿ ಓಡಾಡುತ್ತಿದ್ದಾರೆ ಆದರೆ ರೈತರು ತಮ್ಮ ಭೂಮಿ ಹೋರಾಟ ಮಾಡಿ ಮಾಡುವಂತಿಲ್ಲ ಬಂದಿಸಲಾಗುತ್ತದೆ ಇದು ಯಾವ ಎಂದು ಪ್ರಶ್ನಿಸಿದ್ದಾರೆ.

ಇದೇ ಸಂದರ್ಭದಲ್ಲಿ ಜನತಾ ಪಕ್ಷದ ರಾಜ್ಯ ಕಾರ್ಯದರ್ಶಿ ಕೋ.ಮದನ್, ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷರಾದ ಡಾ.ವಾಣಿ .ಎನ್. ಶೆಟ್ಟಿ, ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ರಾಜು .ಎ, ಕೋಲಾರ ಜಿಲ್ಲಾಧ್ಯಕ್ಷರಾದ ಸುಬ್ರಮಣಿ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ದಾಖಲೆಗಳಿಲ್ಲದೆ ವಾಸ: ಮೂವರು ವಿದೇಶಿ ಪ್ರಜೆಗಳ ವಶ

ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…

1 hour ago

ಘಾಟಿ ಸುಬ್ರಹ್ಮಣ್ಯ‌ ದೇವಾಲಯ ಹುಂಡಿ ಎಣಿಕೆ: 77.58 ಲಕ್ಷ ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…

4 hours ago

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

5 hours ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

5 hours ago

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

9 hours ago