ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಜೂನ್ 27 ರಂದು ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ದೇವನಹಳ್ಳಿ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೆಂಪೇಗೌಡ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇವನಹಳ್ಳಿಯ ಶ್ರೀ ವೇಣು ಗೋಪಾಲಸ್ವಾಮಿ ದೇವಸ್ಥಾನದಿಂದ ಅಂಬೇಡ್ಕರ್ ಭವನದವರೆಗೆ ಕಲಾತಂಡಗಳ ಮೆರವಣಿಗೆಯೊಂದಿಗೆ ಕೆಂಪೇಗೌಡ ಅವರ ಭಾವಚಿತ್ರ ಹೊತ್ತ ರಥ ಸಂಚರಿಸಲಿದ್ದು, ವೇದಿಕೆ ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡರ ವಿಚಾರಧಾರೆಗಳು, ಜೀವನ ಚರಿತ್ರೆ ಕುರಿತ ಉಪನ್ಯಾಸ ನಡೆಯಲಿದೆ ಎಂದು ತಿಳಿಸಿದರು.
ಶಿಷ್ಟಾಚಾರದಂತೆ ಉಸ್ತುವಾರಿ ಸಚಿವರು ಸೇರಿದಂತೆ ಇತರೆ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಅಧಿಕಾರಿಗಳು ಕ್ರಮ ವಹಿಸಬೇಕೆಂದು ತಿಳಿಸಿದರಲ್ಲದೆ, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವೇದಿಕೆ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಕಲಾ ತಂಡಗಳ ವ್ಯವಸ್ಥೆಯನ್ನು ಮಾಡುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಹಾಗೂ ದೇವನಹಳ್ಳಿ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಜಿಲ್ಲೆಯ ರೈತ ಬಾಂಧವರು, ಸಂಘ-ಸಂಸ್ಥೆಗಳ, ಸಮುದಾಯದ ಮುಖಂಡರು, ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಎಂ.ಶ್ರೀನಿವಾಸ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…