ಕಲೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಬೈಂದೂರಿನಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸುರಭಿ ರಿ. ಬೈಂದೂರು ಸಂಸ್ಥೆಯ ಕುಂದಾಪ್ರ ಕನ್ನಡ ಭಾಷೆಯ ನಾಟಕ ʼಮಕ್ಕಳ ರಾಮಾಯಣʼ ಬೆಂಗಳೂರಿನಲ್ಲಿ ಪ್ರಥಮ ಭಾರಿಗೆ ಜೂನ್ 9 ಹಾಗೂ 10ರಂದು ಪ್ರದರ್ಶನಗೊಳ್ಳಲಿದೆ.
ಬಿ.ಆರ್. ವೆಂಕಟರಮಣ ಐತಾಳ್ ಅವರ ರಚಿಸಿರುವ ನಾಟಕವನ್ನು, ಗಣೇಶ್ ಮಂದರ್ತಿ ಕುಂದಾಪುರ ಕನ್ನಡಕ್ಕೆ ಅನುವಾದಿಸಿ ನಿರ್ದೇಶನ ಮಾಡಿದ್ದಾರೆ. ಸುರಭಿ ಬೈಂದೂರು ಸಂಸ್ಥೆಯ ಬಾಲ ಕಲಾವಿದರು ನಾಟಕದಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ಹಲವು ಪ್ರದರ್ಶನಗಳನ್ನು ಕಂಡಿರುವ ಕುಂದಾಪುರ ಕನ್ನಡದ ಈ ನಾಟಕ ರಂಗಾಸಕ್ತರ ಮೆಚ್ಚುಗೆಗೂ ಪಾತ್ರವಾಗಿದೆ.
ರಂಗಾಸ್ಥೆ ರಿ. ಬೆಂಗಳೂರು ನೇತೃತ್ವದಲ್ಲಿ ನಾಗರಬಾವಿಯ ಕಲಾಗ್ರಾಮದಲ್ಲಿ ಜೂನ್ 9 ಹಾಗೂ 10ರ ಸಂಜೆ 7:30ಕ್ಕೆ ನಾಟಕ ಪ್ರದರ್ಶನವಿರಲಿದೆ. ಟಿಕೆಟ್ ದರ ರೂ.200 ನಿಗದಿಪಡಿಲಾಗಿದ್ದು, ಬುಕ್ ಮೈ ಶೋ ಮೂಲಕ ಆನ್ಲೈನ್ನಲ್ಲಿ ಅಥವಾ ಸಂಘಟಕರನ್ನು ಸಂಪರ್ಕಿಸಿ ಟಿಕೆಟ್ ಬುಕ್ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 8310775855 ಸಂಪರ್ಕಿಸಬಹುದಾಗಿದೆ.
ಸುರಭಿ ಸಂಸ್ಥೆಯು ಸಂಗೀತ, ಭರತನಾಟ್ಯ, ಯಕ್ಷಗಾನ, ಚಂಡೆ, ಜಾದೂ, ನಾಟಕ, ಚಿತ್ರಕಲೆ ಮೊದಲಾದ ಕಲೆ ಹಾಗೂ ಸಾಂಸ್ಕೃತಿಕ ಪ್ರಕಾರಗಳನ್ನು ಕಳೆದ 24 ವರ್ಷಗಳಿಂದ ಬೈಂದೂರು ಪರಿಸರದ ವಿದ್ಯಾರ್ಥಿಗಳಿಗೆ ಕಲಿಸುತ್ತಿದೆ. ಪ್ರತಿವರ್ಷ ಸುರಭಿ ಜೈಸಿರಿ ಕಾರ್ಯಕ್ರಮದ ಮೂಲಕ ವಿಶಿಷ್ಟ ಸಾಧಕರಿಗೆ ಬಿಂದುಶ್ರೀ ಪ್ರಶಸ್ತಿ, ಸಾಧಕರಿಗೆ ಗೌರವಾರ್ಪಣೆ, ನಾಟಕೋತ್ಸವ, ಬೇಸಿಗೆ ಶಿಬಿರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ರಂಗ ಸುರಭಿ ಹಿರಿಯ ಕಲಾವಿದರ ತಂಡವು ದೆಹಲಿ, ಮುಂಬೈ, ಮೈಸೂರು, ಹಂಪಿ, ಬೆಂಗಳೂರು ಸೇರಿದಂತೆ ಹಲವೆಡೆ ಪ್ರದರ್ಶನವನ್ನು ನೀಡಿದೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…