ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ತಿಳಿಸಿದರು.

ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ‌ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಸೇರ್ಪಡೆ , ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಖಚಿತಪಡಿಸಿಕೊಳ್ಳಲು ಮುಕ್ತ, ನಿಷ್ಪಕ್ಷಪಾತ ಚುನಾವಣೆ ನಡೆಸಲು,  ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಂಡಿದೆ ಎಂದರು.

ವಿಶೇಷ ಸಮಗ್ರ ಪರಿಷ್ಕರಣೆಯು ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಮೃತಪಟ್ಟವರ ಹೆಸರನ್ನು ‌ಪಟ್ಟಿಯಿಂದ ತೆಗೆಯುವುದು. ವಿವಿಧ ಕಾರಣಗಳಿಂದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಗೊಂಡ ಮತದಾರರು, ವಲಸಿಗ ಮತದಾರರು ಹಾಗೂ ಎರಡಕ್ಕೂ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಹೆಸರಿರುವ ಮತದಾರರು ಹಾಗೂ ಭಾರತೀಯ ನಾಗರೀಕರಲ್ಲದವರಿಗೆ ಮತದಾನದ ಹಕ್ಕು ಇಲ್ಲದ ಕಾರಣ ಅವರ ‌ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯುವುದಾಗಿದೆ ಎಂದು ತಿಳಿಸಿದರು.

*ವೇಳಾಪಟ್ಟಿ*

2026ರ ಅಕ್ಟೋಬರ್ 1 ಅರ್ಹತಾ ದಿನಾಂಕವನ್ನಾಗಿ ಮಾನದಂಡವಾಗಿಟ್ಟುಕೊಂಡು ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ. ಇದರ ಭಾಗವಾಗಿ ಜೂನ್ 20 ರಿಂದ 29ರವರೆಗೆ‌ ಸಿದ್ದತೆ, ತರಬೇತಿ, ನಮೂನೆ ಮುದ್ರಣ ಕಾರ್ಯ ನಡೆಯಲಿದೆ. ಜೂನ್ 30 ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ-ಮನೆಗೆ ಭೇಟಿ ನೀಡಲಿದ್ದಾರೆ.

*ಅ.7ರಂದು ಅಂತಿಮ ಪಟ್ಟಿ ಪ್ರಕಟ*

ಮತಗಟ್ಟೆಗಳ ಪುನರ್‌ವಿಂಗಡಣೆ ಪ್ರಕ್ರಿಯೆ ಜುಲೈ 29ರೊಳಗೆ ಪೂರ್ಣಗೊಳ್ಳಲಿದೆ. ಆ.5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಆ.5ರಿಂದ ಸೆ.4ರ ವರೆಗೆ ಹಕ್ಕು ಹಾಗೂ ಆಕ್ಷೇಪಣೆಗಳ ಸಲ್ಲಿಕೆಗೆ ಅವಕಾಶ ವಿದೆ.ಆಗಸ್ಟ್‌ 5 ರಿಂದ ಅಕ್ಟೋಬರ್‌ 3 ರವರೆಗೆ  ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗುತ್ತದೆ. ಅಕ್ಟೋಬರ್‌ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ 4 ವಿಧಾನಸಭಾ ಕ್ಷೇತ್ರಗಳಿದ್ದು,4 ಮತದಾರರ ನೋಂದಣಾಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. 4 ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 8 ಸಹಾಯಕ ಮತದಾರ ನೋಂದಣಾಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಎಲ್ಲಾ ಮತದಾರ ನೋಂದಣಾಧಿಕಾರಿಗಳಿಗೆ ಮತ್ತು ಸಹಾಯಕ ಮತದಾರ ನೋಂದಣಾಧಿಕಾರಿಗಳಿಗೆ ಈಗಾಗಲೇ ತರಬೇತಿಯನ್ನು ನೀಡಲಾಗಿರುತ್ತದೆ. ಜಿಲ್ಲೆಯಲ್ಲಿ 1141 ಮತಗಟ್ಟೆಗಳಿದ್ದು, ಎಲ್ಲಾ ಮತಗಟ್ಟೆಗಳಿಗೆ 1141 ಬಿಎಲ್ಓಗಳನ್ನು ಮತ್ತು ಪ್ರತಿ 10 ರಿಂದ 12 ಮತಗಟ್ಟೆಗಳಿಗೆ ಒಬ್ಬರಂತೆ ಒಟ್ಟು ಬಿಎಲ್ಓ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿರುತ್ತದೆ. ಮೊದಲನೇ ಹಂತದಲ್ಲಿ ಬಿಎಲ್ಒ ಗಳಿಗೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಜೊತೆಗೆ ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಬಿಎಲ್ಒ ಸೌಲಭ್ಯ ಕೇಂದ್ರ ತೆರೆಯಲಾಗಿದೆ ಎಂದರು.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬಿಎಲ್‌ಒಗಳು ಪ್ರತಿ ಮನೆಗಳಿಗೆ ಭೇಟಿನೀಡಿ ಮತದಾರರಿಗೆ ನಕಲು ಪ್ರತಿಗಳಲ್ಲಿ ಗಣತಿ ನಮೂನೆ ಪ್ರತಿಯನ್ನು ವಿತರಿಸಲಿದ್ದಾರೆ. 2ನೇ ಭೇಟಿಯಲ್ಲಿ ಬಿ.ಎಲ್.ಒಗಳು ಮತದಾರರು ಭರ್ತಿ ಮಾಡಿದ ಫಾರಂ ಸಂಗ್ರಹಿಸಿ ಸ್ವೀಕೃತಿ ನೀಡುತ್ತಾರೆ. ಮತದಾರರು ಹಿಂದಿನ ಎಸ್‌ಐಆರ್‌ನ ಮತದಾರರ ಪಟ್ಟಿಯಲ್ಲಿ ವಿವರಗಳನ್ನು ಒದಗಿಸ ಬೇಕು. ಹಿಂದಿನ ಎಸ್‌ಐಆರ್ ಮಾಹಿತಿಯನ್ನು https://voters.eci.gov.in ವೆಬ್ ಸೈಟ್ ನಲ್ಲಿ ಪಡೆಯಬಹುದು ಎಂದು ತಿಳಿಸಿದರು.

ಬಿಎಲ್‌ಒಗಳು ಮತದಾರರಿಂದ ಫಾರಂ ಸಂಗ್ರಹಿಸಲು 3 ಬಾರಿ ಭೇಟಿ ನೀಡಲಿದ್ದಾರೆ. ಮನೆ ಬೀಗ ಹಾಕಿದ್ದರೆ ಫಾರಂ ಅನ್ನು ಮನೆಗೆ ಅಂಟಿಸಲಾಗುತ್ತದೆ, ನೆರೆ ಹೊರೆಯವರ ಸಹಾಯ ಪಡೆದು ಮನೆಯ ಮಾಲೀಕರನ್ನು ಸಂಪರ್ಕಿಸುವ ಯತ್ನ ಮಾಡಲಿದ್ದಾರೆ. ಯಾವುದೇ ಪ್ರತಿಕ್ರಿಯೆ ನೀಡದಿದ್ದರೆ ಹಾಗೂ ಫಾರಂಗಳನ್ನು ಸ್ವೀಕರಿಸದಿದ್ದಲ್ಲಿ ಮತದಾರರನ್ನು ಪಟ್ಟಿಯಿಂದ ಹೆಸರು ಕೈಬಿಡಲಾಗುವುದು. ಹೊಸ ಮತದಾರರು ಘೋಷಣೆಯೊಂದಿಗೆ ನಮೂನೆ 6 ಸಲ್ಲಿಸಬೇಕು ಎ‌ಂದು ತಿಳಿಸಿದರು.

ಅರ್ಹ ಮತದಾರರನ್ನು ಕರಡು ಮತದಾರರ ಪಟ್ಟಿಗೆ ಸೇರಿಸಲಾಗುತ್ತದೆ. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಆಕ್ಷೇಪಣೆಗಳನ್ನು ಆಹ್ವಾನಿಸಲಾಗುತ್ತದೆ. ಹೆಸರು ಸೇರ್ಪಡೆಗಾಗಿ ಫಾರಂ 6 ಹಾಗೂ 8 ನೀಡಲಾಗುತ್ತದೆ. ಮತದಾರರ ಪಟ್ಟಿಯಿಂದ ಹೊರಗಿಡುವಿಕೆ, ಅಳಿಸುವಿಕೆ ಆಕ್ಷೇಪಣೆಗಳಿಗೆ ಫಾರಂ 7 ಸಲ್ಲಿಸಬೇಕಾಗುತ್ತದೆ ಎಂದು ತಿಳಿಸಿದರು.

*ಬೂತ್ ಲೆವೆಲ್ ಏಜೆಂಟರ ನೇಮಕ* 

ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯಕ್ಕೆ ರಾಜಕೀಯ ಪಕ್ಷಗಳು ಸಹ ನೆರವು ನೀಡಲು ಅವಕಾಶ ಕಲ್ಪಿಸಲಾಗಿದೆ, ಈ ಪ್ರಕ್ರಿಯೆಯಲ್ಲಿ ರಾಜಕೀಯ ಪಕ್ಷಗಳು ಬೂತ್ ಲೆವೆಲ್ ಏಜೆಂಟರುಗಳನ್ನು ನೇಮಕ ಮಾಡಿಕೊಳ್ಳಬಹುದಾಗಿದ್ದು ಅವರಿಗೆ ಗುರುತಿನ ಚೀಟಿ ನೀಡುತ್ತಾರೆ. ಇದರೊಂದಿಗೆ ಪ್ರತಿಯೊಂದು ಪಂಚಾಯತ್‌ಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮತದಾರರ ನೆರವು ಕೇಂದ್ರಗಳನ್ನು ರಚಿಸಲಾಗುವುದು, ಅಲ್ಲಿ ಬೂತ್ ಮಟ್ಟದ ಎಜೆಂಟರು ಬಿಎಲ್‌ಓ ಅವರೊಂದಿಗೆ ತೆರಳಿ ನೆರವು ನೀಡಬಹುದು. ಅದಕ್ಕಾಗಿ ರಾಜಕೀಯ ಪಕ್ಷಗಳು ಏಜೆಂಟರಿಗೆ ಕಂಪ್ಯೂಟರ್‌ ಹಾಗೂ ಇಂಟರ್‌ನೆಟ್ ಸಂಪರ್ಕ ಒದಗಿಸಲಾಗುವುದು.

ಬಿಎಲ್‌ಓಗಳು ಅಲ್ಲಿ ದಾಖಲಾತಿಗಳನ್ನು ಅಪ್ ಲೋಡ್‌ ಮಾಡಲು ಇದರಿಂದ ಅನುಕೂಲವಾಗಲಿದೆ. ನಾಗರೀಕರು ಕೂಡ ಅಲ್ಲಿ ಬಂದು ದಾಖಲಾತಿಗಳನ್ನು ನೀಡಬಹುದಾಗಿದೆ. ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಸೂಕ್ಷ್ಮವಾದ ಪ್ರಕ್ರಿಯೆಯಾಗಿದ್ದು, ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅರ್ಹ ಮತದಾರರ ಹೆಸರನ್ನು ಕೈ ಬಿಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗಿದೆ ಎಂದರು.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಮುಖ್ಯ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಮತದಾರರ ಪಟ್ಟಿ ಪರಿಷ್ಕರಣೆ ಪಾರದರ್ಶಕವಾಗಿ ನಡೆಯಲಿದ್ದು ಸಾರ್ವಜನಿಕರು ಸಹಕರಿಸಿ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

17 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

19 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

20 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

1 day ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 day ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago