ಜೂ.7ರಂದು ಬಕ್ರೀದ್ ಹಬ್ಬ: ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ- ಬಕ್ರೀದ್ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು- ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಸೂಚನೆ

ಜೂ.7ರಂದು ಬಕ್ರೀದ್ ಹಬ್ಬವನ್ನು ಅರ್ಥಪೂರ್ಣವಾಗಿ ಸಂಭ್ರಮದಿಂದ ಆಚರಿಸಲು ಮುಸ್ಲಿಂ ಬಾಂಧವರು ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದಾರೆ. ಇದರ ನಡುವೆ ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಪೊಲೀಸ್‌ ಠಾಣೆಗಳಲ್ಲಿ ಶಾಂತಿ ಸಭೆಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ.

ಸಾಮೂಹಿಕ ಪ್ರಾರ್ಥನೆ, ಅತಿಥಿ ಸತ್ಕಾರದ ಇಫ್ತಿಯಾರ್ ಕೂಟ ಸೇರಿದಂತೆ ಧಾರ್ಮಿಕ ವಿವಿಧ ಸೇವಾ ಚಟುವಟಿಕೆಯ ಮೂಲಕ ಭಗವಂತನನ್ನು ಪ್ರಾರ್ಥಿಸಲಾಗುತ್ತದೆ. ಈ ಹಿನ್ನೆಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಮುಖಂಡರ ಸಭೆಯನ್ನು ನಡೆಸಿ, ಹಬ್ಬದ ವೇಳೆ ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ನೀಡಲಾಯಿತು.

ಇಸ್ಲಾಂ ಧರ್ಮದ ಪದ್ಧತಿಯಂತೆ ಬಕ್ರೀದ್ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು. ಯಾವುದೇ ಅಹಿತಕರ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಕೂಡಲೇ ಪೊಲೀಸ್‌ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಯಾವುದೇ ಧರ್ಮದ ಹಬ್ಬ ಹರಿದಿನವಾಗಲಿ, ಮತ್ತೊಂದು ಧರ್ಮದವರಿಗೆ ತೊಡಕು ಉಂಟಾಗದ ರೀತಿಯಲ್ಲಿ ಆಚರಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಯಿತು.

ಹಿಂದೂ-ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಶಾಂತಿಯಿಂದ ಹಬ್ಬವನ್ನು ಆಚರಿಸಬೇಕು. ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಿಂದಿನಿಂದಲೂ ಎಲ್ಲಾ ಮಸೀದಿಗಳಲ್ಲಿ ಶಾಂತಿ, ಸೌಹಾರ್ದತೆಯಿಂದ ಹಬ್ಬಗಳು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಮುಂದಿನ ದಿನಗಳಲ್ಲೂ ಕೂಡಾ ಇದೇ ಸಂಸ್ಕೃತಿ ಮುಂದುವರೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ಈ ವೇಳೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

52 minutes ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

3 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

3 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

3 hours ago

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

5 hours ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

6 hours ago