ಜೂ.7ರಂದು ಬಕ್ರೀದ್ ಹಬ್ಬವನ್ನು ಅರ್ಥಪೂರ್ಣವಾಗಿ ಸಂಭ್ರಮದಿಂದ ಆಚರಿಸಲು ಮುಸ್ಲಿಂ ಬಾಂಧವರು ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದಾರೆ. ಇದರ ನಡುವೆ ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಪೊಲೀಸ್ ಠಾಣೆಗಳಲ್ಲಿ ಶಾಂತಿ ಸಭೆಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ.
ಸಾಮೂಹಿಕ ಪ್ರಾರ್ಥನೆ, ಅತಿಥಿ ಸತ್ಕಾರದ ಇಫ್ತಿಯಾರ್ ಕೂಟ ಸೇರಿದಂತೆ ಧಾರ್ಮಿಕ ವಿವಿಧ ಸೇವಾ ಚಟುವಟಿಕೆಯ ಮೂಲಕ ಭಗವಂತನನ್ನು ಪ್ರಾರ್ಥಿಸಲಾಗುತ್ತದೆ. ಈ ಹಿನ್ನೆಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಮುಖಂಡರ ಸಭೆಯನ್ನು ನಡೆಸಿ, ಹಬ್ಬದ ವೇಳೆ ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ನೀಡಲಾಯಿತು.
ಹಿಂದೂ-ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಶಾಂತಿಯಿಂದ ಹಬ್ಬವನ್ನು ಆಚರಿಸಬೇಕು. ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ವೇಳೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…