ಜೂ.7ರಂದು ಬಕ್ರೀದ್ ಹಬ್ಬವನ್ನು ಅರ್ಥಪೂರ್ಣವಾಗಿ ಸಂಭ್ರಮದಿಂದ ಆಚರಿಸಲು ಮುಸ್ಲಿಂ ಬಾಂಧವರು ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದಾರೆ. ಇದರ ನಡುವೆ ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಪೊಲೀಸ್ ಠಾಣೆಗಳಲ್ಲಿ ಶಾಂತಿ ಸಭೆಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ.
ಸಾಮೂಹಿಕ ಪ್ರಾರ್ಥನೆ, ಅತಿಥಿ ಸತ್ಕಾರದ ಇಫ್ತಿಯಾರ್ ಕೂಟ ಸೇರಿದಂತೆ ಧಾರ್ಮಿಕ ವಿವಿಧ ಸೇವಾ ಚಟುವಟಿಕೆಯ ಮೂಲಕ ಭಗವಂತನನ್ನು ಪ್ರಾರ್ಥಿಸಲಾಗುತ್ತದೆ. ಈ ಹಿನ್ನೆಲೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಅಮರೇಶ್ ಗೌಡ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಮುಖಂಡರ ಸಭೆಯನ್ನು ನಡೆಸಿ, ಹಬ್ಬದ ವೇಳೆ ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ನೀಡಲಾಯಿತು.
ಇಸ್ಲಾಂ ಧರ್ಮದ ಪದ್ಧತಿಯಂತೆ ಬಕ್ರೀದ್ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು. ಯಾವುದೇ ಅಹಿತಕರ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಯಾವುದೇ ಧರ್ಮದ ಹಬ್ಬ ಹರಿದಿನವಾಗಲಿ, ಮತ್ತೊಂದು ಧರ್ಮದವರಿಗೆ ತೊಡಕು ಉಂಟಾಗದ ರೀತಿಯಲ್ಲಿ ಆಚರಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಯಿತು.
ಹಿಂದೂ-ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಶಾಂತಿಯಿಂದ ಹಬ್ಬವನ್ನು ಆಚರಿಸಬೇಕು. ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಹಿಂದಿನಿಂದಲೂ ಎಲ್ಲಾ ಮಸೀದಿಗಳಲ್ಲಿ ಶಾಂತಿ, ಸೌಹಾರ್ದತೆಯಿಂದ ಹಬ್ಬಗಳು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಮುಂದಿನ ದಿನಗಳಲ್ಲೂ ಕೂಡಾ ಇದೇ ಸಂಸ್ಕೃತಿ ಮುಂದುವರೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.
ಈ ವೇಳೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಕೃಷ್ಣಪ್ಪ, ಅಧಿಕಾರಿಗಳು, ಸಿಬ್ಬಂದಿ, ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…