ಜೂ.7ರಂದು ಬಕ್ರೀದ್ ಹಬ್ಬ: ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ: ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಹಬ್ಬ ಆಚರಿಸಿ- ಇನ್ಸ್ ಪೆಕ್ಟರ್ ಅಮರೇಶ್ ಗೌಡ

ಜೂ.7ರಂದು ಬಕ್ರೀದ್ ಹಬ್ಬವನ್ನು ಅರ್ಥಪೂರ್ಣವಾಗಿ ಸಂಭ್ರಮದಿಂದ ಆಚರಿಸಲು ಮುಸ್ಲಿಂ ಬಾಂಧವರು ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದಾರೆ. ಇದರ ನಡುವೆ ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಪೊಲೀಸ್‌ ಠಾಣೆಗಳಲ್ಲಿ ಶಾಂತಿ ಸಭೆಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ.

ಸಾಮೂಹಿಕ ಪ್ರಾರ್ಥನೆ, ಅತಿಥಿ ಸತ್ಕಾರದ ಇಫ್ತಿಯಾರ್ ಕೂಟ ಸೇರಿದಂತೆ ಧಾರ್ಮಿಕ ವಿವಿಧ ಸೇವಾ ಚಟುವಟಿಕೆಯ ಮೂಲಕ ಭಗವಂತನನ್ನು ಪ್ರಾರ್ಥಿಸಲಾಗುತ್ತದೆ. ಈ ಹಿನ್ನೆಲೆ ದೊಡ್ಡಬಳ್ಳಾಪುರ ನಗರ ಪೊಲೀಸ್‌ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಅಮರೇಶ್ ಗೌಡ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಮುಖಂಡರ ಸಭೆಯನ್ನು ನಡೆಸಿ, ಹಬ್ಬದ ವೇಳೆ ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ನೀಡಲಾಯಿತು.

ಇಸ್ಲಾಂ ಧರ್ಮದ ಪದ್ಧತಿಯಂತೆ ಬಕ್ರೀದ್ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು. ಯಾವುದೇ ಅಹಿತಕರ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಕೂಡಲೇ ಪೊಲೀಸ್‌ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಯಾವುದೇ ಧರ್ಮದ ಹಬ್ಬ ಹರಿದಿನವಾಗಲಿ, ಮತ್ತೊಂದು ಧರ್ಮದವರಿಗೆ ತೊಡಕು ಉಂಟಾಗದ ರೀತಿಯಲ್ಲಿ ಆಚರಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಯಿತು.

ಹಿಂದೂ-ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಶಾಂತಿಯಿಂದ ಹಬ್ಬವನ್ನು ಆಚರಿಸಬೇಕು. ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಹಿಂದಿನಿಂದಲೂ ಎಲ್ಲಾ ಮಸೀದಿಗಳಲ್ಲಿ ಶಾಂತಿ, ಸೌಹಾರ್ದತೆಯಿಂದ ಹಬ್ಬಗಳು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಮುಂದಿನ ದಿನಗಳಲ್ಲೂ ಕೂಡಾ ಇದೇ ಸಂಸ್ಕೃತಿ ಮುಂದುವರೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ಈ ವೇಳೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಕೃಷ್ಣಪ್ಪ, ಅಧಿಕಾರಿಗಳು, ಸಿಬ್ಬಂದಿ, ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

5 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

10 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

13 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago