ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ನಾಮಪತ್ರ ಸಲ್ಲಿಕೆ

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ, ಈಗಾಗಲೇ ಆಯಾ ಪಕ್ಷಗಳಿಂದ ಟಿಕೆಟ್ ಪಡೆದ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ.

ಏಪ್ರಿಲ್ 15ರ ಶನಿವಾರದಂದು ತಾಲೂಕಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ, ಸತತವಾಗಿ ಮೂರು ಬಾರಿ ಸ್ಪರ್ಧಿಸಿ ಹ್ಯಾಟ್ರಿಕ್ ಸೋಲನ್ನ‌ ಅನುಭವಿಸಿ, ನಾಲ್ಕನೇ ಬಾರಿಗೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ.

ಬಿ.ಮುನೇಗೌಡ ಸ್ಪರ್ಧೆಗೆ ಸ್ವಪಕ್ಷದಿಂದಲೇ ಅಪಸ್ವರ ಕೇಳಿ ಬಂದಿತ್ತು ವರಿಷ್ಠರು ಮಧ್ಯಸ್ಥಿಕೆ ವಹಿಸಿ ಭಿನ್ನಮತ ಶಮನ ಮಾಡಿ ಕೊನೆಗೆ ಮುನೇಗೌಡರಿಗೆ ಟಿಕೆಟ್ ನೀಡಿತು. ಒಂದು ಕಡೆ ಕ್ಷೇತ್ರದ ಮತದಾರರು ಅನುಕಂಪ ಆಧಾರದ ಮೇಲೆ ಮತ ನೀಡುತ್ತಾರೆ ಎಂದು ವರಿಷ್ಠರು‌ ಗಮನಿಸಿ ಟಿಕೆಟ್ ನೀಡಿದ್ದಾರೆ ಎಂಬ ಕೂಗು ಸಹ ಕೇಳಿಬರುತ್ತಿದೆ. ಏನೇ ಆಗಲಿ ಈ ಬಾರಿ ಆದರೂ ಕ್ಷೇತ್ರದ ಜನತೆ ಬಿ.ಮುನೇಗೌಡರಿಗೆ ಆರ್ಶೀವಾದ ಮಾಡುತ್ತಾರಾ? ಎಂಬುದನ್ನು ಕಾದು‌ ನೋಡಬೇಕಿದೆ.

ನಾಮಪತ್ರ ಸಲ್ಲಿಕೆ ವೇಳೆ ಮುನೇಗೌಡ ಪತ್ನಿ ಪದ್ಮಾವತಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

38 minutes ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

2 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

15 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

16 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

17 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

21 hours ago