Categories: ಕೋಲಾರ

ಜೆಡಿಎಸ್‌ ಎಸ್ಸಿ ಘಟಕದಿಂದ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

ಕೋಲಾರ: ನಗರದ ನಚಿಕೇತನ ನಿಲಯದಲ್ಲಿ ಜೆಡಿಎಸ್‌ ಜಿಲ್ಲಾ ಎಸ್ಸಿ ಘಟಕದ ವತಿಯಿಂದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 68 ನೇ ಪರಿನಿರ್ವಾಣ ದಿನದ ಪ್ರಯುಕ್ತ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಮಾತನಾಡಿ ದೇಶದಲ್ಲಿ ತಾಂಡವಾಡುತ್ತಿದ್ದ ಅಸೃಶ್ಯತೆ ಮತ್ತು ಜಾತೀಯತೆ ವಿರುದ್ಧ ಸಾಕಷ್ಟು ಹೋರಾಟ ನಡೆಸಿದ ಡಾ. ಬಿ.ಆರ್‌. ಅಂಬೇಡ್ಕರ್‌ ಅವರು ದಲಿತ ಸಮುದಾಯಗಳಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.ಇಡೀ ವಿಶ್ವಕ್ಕೆ ಮೆಚ್ಚುವಂತಹ ಸಂವಿಧಾನ ರಚಿಸಿದ್ದಾರೆ ಅವರು ಕೇವಲ ಒಂದು ಜಾತಿಗೆ ಸೀಮಿತ ಅಲ್ಲ ಮನುಕುಲಕ್ಕೆ ಅವರ ಕೊಡುಗೆ ಅಪಾರವಾದದ್ದು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ನೀಡಿದ್ದಾರೆ ಅಂಬೇಡ್ಕರ್‌ ರವರ ವಿಚಾರ ಧಾರೆಗಳನ್ನು ಅರ್ಥ ಮಾಡಿಕೊಂಡರೆ ಯುವ ಪೀಳಿಗೆಯ ಭವಿಷ್ಯ ಉಜ್ವಲವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಟಮಕ ಜಯಚಂದ್ರ, ವಾಲ್ಮೀಕಿ ಮಹಾಸಭಾ ಜಿಲ್ಲಾ ಅಧ್ಯಕ್ಷ ನರಸಿಂಹಯ್ಯ, ಖಜಾಂಚಿ ಮುನಿಯಪ್ಪ, ಮುಖಂಡರಾದ ಹಾರೋಹಳ್ಳಿ ನಾಗರಾಜ್, ರಾಜಪ್ಪ, ಅಲೇರಿ ಮುನಿರಾಜು ಮುಂತಾದವರು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

9 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

11 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

12 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 day ago