ಜೆಡಿಎಸ್ ಕಚೇರಿಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

ಇಂದು ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ದೊಡ್ಡಬಳ್ಳಾಪುರ ನಗರದ ಜೆಡಿಎಸ್‌ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡರ ನೇತೃತ್ವದಲ್ಲಿ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯನ್ನು ಆಚರಿಸಲಾಯಿತು.

ಎತ್ತಿನಗಾಡಿಯನ್ನು ಕಬ್ಬಿನ ಜೊಲ್ಲೆಗಳಿಂದ ಸಿಂಗರಿಸಿ, ಗೋ ಪೂಜೆ ನೆರವೇರಿಸಿ, ಎತ್ತುಗಳಿಗೆ ಗೆಣಸು, ಕಡಲೆಕಾಯಿ, ಕಬ್ಬು, ಅವರೆಕಾಯಿ ತಿನ್ನಿಸಿ, ಕಬ್ಬಿನ ಜೊಲ್ಲೆಗಳನ್ನು ಹಿಡಿದು ಮುನೇಗೌಡರೊಂದಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿ ಬಿ.ಮುನೇಗೌಡ ಅವರು, ರೈತ ಬೆಳೆದ ಬೆಳೆಗಳ ರಾಶಿ ಹಾಗೂ ಜಾನುವಾರುಗಳನ್ನು ಪೂಜೆಸುವ ಮಹತ್ವದ ದಿನವೇ ಸಂಕ್ರಾಂತಿ ಆಚರಣೆಯಾಗಿದೆ. ಜೆಡಿಎಸ್‌ ಪಕ್ಷಕ್ಕೂ ರೈತರಿಗೆ ಅವಿನಾಭಾವ ಸಂಬಂಧವಿದೆ. ಆ ಕಾರಣವೇ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರನ್ನು ಮಣ್ಣಿನ ಮಗ ಎಂದು ರಾಷ್ಟ್ರ ಮಟ್ಟದಲ್ಲಿ ಕರೆಯಲಾಗಿದೆ ಎಂದರು.

ಅಲ್ಲದೆ ಪಂಜಾಬ್‌ನ ರೈತರು, ಅವರ ಕೃಷಿ ಪರ ಕಾಳಜಿಗೆ ಗೌರವ ಸೂಚಕವಾಗಿ ‘ದೇವೇಗೌಡ’ ಎಂಬ ಹೆಸರಿನ ಅಕ್ಕಿ ತಳಿಯೊಂದನ್ನು ನಾಮಕರಣ ಮಾಡಿದ್ದಾರೆ ಇದು ಜೆಡಿಎಸ್‌ ವರಿಷ್ಠರಿಗೆ ರೈತರ ಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸುಮಾರು 25 ಸಾವಿರ ಕೋಟಿ ಸಾಲ ಮನ್ನ ಮಾಡಿ ರೈತರ ನೆರವಿಗೆ ಬಂದವರು. ಅಂದಿನಿಂದ ಮಾಧ್ಯಮಗಳಲ್ಲಿ ರೈತರ ಆತ್ಮಹತ್ಯೆಯ ವರದಿಗಳು ಕಡಿಮೆಯಾಗಿದೆ ಎಂದರು.

ಇನ್ನೂ ಇತ್ತೀಚಿಗಿನ ದೊಡ್ಡಬಳ್ಳಾಪುರ ಜೆಡಿಎಸ್‌ ಮುಖಂಡರ ಬಣ ಬಡಿದಾಟದ ಕುರಿತಂತೆ ಕಾಂಗ್ರೆಸ್ ಲೇವಡಿ ಮಾಡಿರುವ ಕುರಿತಂತೆ ಪ್ರತಿಕ್ರಿಯೆ ನೀಡಿದ ಬಿ.ಮುನೇಗೌಡ ಅವರು, ಮನೆ ಎಂದ ಮೇಲೆ ಅಲ್ಪಸ್ವಲ್ಪ ಬೇಸರ ಇರುತ್ತೆ.. ಆದರೆ ಎಲ್ಲರೂ ಒಂದಾಗಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಬದ್ದರಾಗಿದ್ದೇವೆ. ಆದರೆ ಕಾಂಗ್ರೆಸ್ ನವರ ಕುರ್ಚಿ ಕದನ ನೋಡಿದರೆ, 2028 ರ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ಅವರಿಗೆ ಇಲ್ಲವಾಗಿದ್ದು ಕುಮಾರಸ್ವಾಮಿ ಅವರಿಗೆ ಈ ಮೂಲಕ ಆಹ್ವಾನ ನೀಡುತ್ತಿದ್ದಾರೆ ಎಂದರು.

ಈ ವೇಳೆ ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ವಕ್ತಾರ ಕುಂಟನಹಳ್ಳಿ ಮಂಜುನಾಥ್, ನಗರಸಭೆ ಸದಸ್ಯರಾದ ತ.ನ.ಪ್ರಭುದೇವ್, ವಡ್ಡರಹಳ್ಳಿ ರವಿಕುಮಾರ್, ಮುಖಂಡರಾದ ರಾಜಘಟ್ಟ ಹರೀಶ್, ತಳವಾರ ನಾಗರಾಜ್, ಜಗನ್ನಾಥ ಚಾರ್, ಸತೀಶ್, ಭಾಗ್ಯಮ್ಮ ಶಶಿಕಲಾ, ರಾಮಕೃಷ್ಣ, ಸಂತೋಷ್, ಭಾನು, ಕೆಂಪೇಗೌಡ, ವಿನಯ್, ಸುರೇಶ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

35 minutes ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

2 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

6 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

7 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

13 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

13 hours ago