ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಕೆ. ವಿ. ಮಂಜುನಾಥ್ ಹಾಗೂ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ..

ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾಗಿ ನನ್ನನ್ನು ಆಯ್ಕೆ ಮಾಡಿದ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷರಾದ ಕೃಷ್ಣಾರೆಡ್ಡಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಕೆ. ವಿ. ಮಂಜುನಾಥ್ ಅವರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ನೂತನ ಅಧ್ಯಕ್ಷ ಹರೀಶ್ ಗೌಡ ಅವರು ಸಾಮಾಜಿಕ‌ ಜಾಲತಾಣಗಳಲ್ಲಿ ತಿಳಿಸಿದ್ದಾರೆ..

Leave a Reply

Your email address will not be published. Required fields are marked *

error: Content is protected !!