Categories: ಕೋಲಾರ

ಜೆಡಿಎಸ್‌ ತಾಲೂಕು ಮಟ್ಟದ ಕಾರ್ಯಕರ್ತರ ಸಭೆ: ಅಧಿಕಾರದ ಆಸೆ ಬಿಡಿ ಪಕ್ಷನಿಷ್ಠೆಗೆ ಒತ್ತು ನೀಡಲು ಸಿಎಂಆರ್ ಶ್ರೀನಾಥ್ ಮನವಿ

ಕೋಲಾರ: ಅಧಿಕಾರದ ಆಸೆ ಬಿಟ್ಟು ಪಕ್ಷದ ಸಂಘಟನೆಗೆ ಒತ್ತು ನೀಡಿ, ಪಕ್ಷನಿಷ್ಠೆಯಿಂದ ಪ್ರಾಮಾಣಿವಾಗಿ ಕೆಲಸ ಮಾಡಿದರೆ ಮಾತ್ರವೇ ಅಧಿಕಾರದ ಸ್ಥಾನಮಾನಗಳು ಸಿಗುತ್ತವೆ ಎಂದು ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ತಿಳಿಸಿದರು.

ತಾಲೂಕಿನ ಕಾಮಧೇನಹಳ್ಳಿಯಲ್ಲಿ ಬುಧವಾರ ಜೆಡಿಎಸ್‌ ತಾಲೂಕು ಘಟಕದಿಂದ ಮುಂಬರುವ ಜಿಪಂ ತಾಪಂ ಹಾಗೂ ಎಪಿಎಂಸಿ ಚುನಾವಣೆ ಮತ್ತು ಪಕ್ಷದ ಪದಾಧಿಕಾರಿಗಳ ಆಯ್ಕೆ ಸಂಬಂಧಿಸಿದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಮ್ಮ ತಮ್ಮ ಗ್ರಾಮಗಳಲ್ಲಿ ಸಮಸ್ಯೆಗಳ ಆಧಾರದಲ್ಲಿ ಜೆಡಿಎಸ್‌ ಪಕ್ಷವನ್ನು ಸಂಘಟಿಸಬೇಕಾಗಿದೆ. ಹಣ ಬಲವಿದ್ದರೆ ಅಷ್ಟೇ ಸಾಲದು ವಿರೋಧ ಪಕ್ಷಗಳ ತಂತ್ರ ಪ್ರತಿತಂತ್ರಗಳಿಗೆ ಪ್ರತಿರೋಧ ವ್ಯಕ್ತಪಡಿಸವಂತ ನಾಯಕತ್ವ ಗುಣಗಳು ಕಾರ್ಯಕರ್ತರಲ್ಲಿ ಬರಬೇಕು. ಪಕ್ಷದ ನಿಷ್ಠೆಗೆ ಮತ್ತು ಸಿದ್ದಾಂತಕ್ಕೆ ಪ್ರತಿಯೊಬ್ಬರೂ ಗೌರವ ಕೊಡಬೇಕಾಗಿದೆ ಎಂದರು.

ಜಿಲ್ಲೆಯಲ್ಲಿ ಜೆಡಿಎಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಎದುರಿಸುತ್ತಿರುವ ಕಷ್ಟಗಳನ್ನು ರಾಜ್ಯ ಮಟ್ಟದಲ್ಲಿ ಕೂಡ ಚರ್ಚೆ ನಡೆದಿದೆ ಯಾವುದೇ ಒಬ್ಬ ವ್ಯಕ್ತಿಯ ಮತ್ತು ಪಕ್ಷದ ಭಾನವನೆಗಳಿಗೆ ಧಕ್ಕೆಯಾಗದಂತೆ ತಮ್ಮ ಅಭಿಪ್ರಾಯ, ಅನಿಸಿಕೆಗಳನ್ನು ವ್ಯಕ್ತಪಡಿಸಬೇಕು ಅಧಿಕಾರ ಪಡೆದು ನಂಬಿಕೆ ದ್ರೋಹ ಬಗೆದವರಿಗೆ ದೊಡ್ಡ ಮಟ್ಟದಲ್ಲಿ ಉತ್ತರ ನೀಡಬೇಕಾಗಿದೆ ಇದಕ್ಕೆ ಒಗ್ಗಟ್ಟಿನಿಂದ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಬೇಕು ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಮಾತನಾಡಿ ಪಕ್ಷದ ರಾಜ್ಯ ಉಸ್ತುವಾರಿಯ ಆದೇಶದಂತೆ ಸದಸ್ಯತ್ವ ಅಭಿಯಾನ ಮತ್ತು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಅದರಂತೆ ಪ್ರತಿ ಗ್ರಾಮದಲ್ಲಿ ಬೂತ್ ಸಮಿತಿ ಸೇರಿದಂತೆ ಹೋಬಳಿ, ತಾಲೂಕು ಘಟಕಗಳನ್ನು ರಚನೆ ಮಾಡಬೇಕು ಮುಂಬರಲಿರುವ ಪ್ರತಿಯೊಂದು ಚುನಾವಣೆಯಲ್ಲಿ ಸಹ ಗೆಲುವು ಸಾಧಿಸಲು ಪಕ್ಷದ ನಾಯಕರು ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿ ಇರಬೇಕು ಮುಂದಿನ ದಿನಗಳಲ್ಲಿ ಪಕ್ಷದ ನಿಷ್ಠಾವಂತರಿಗೆ ಮೊದಲ ಅಧ್ಯತೆ ನೀಡಲಾಗುತ್ತದೆ ಎಂದರು,

ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು ಮಾತನಾಡಿ ಜಿಲ್ಲೆಯಲ್ಲಿ ಜೆಡಿಎಸ್‌ ಪಕ್ಷವು ಬಲಿಷ್ಠವಾಗಿ ಇದ್ದರೂ ಅಧಿಕಾರ ಪಡೆಯುವ ಸಂದರ್ಭದಲ್ಲಿ ಪಕ್ಷವು ತೊಂದರೆಗಳನ್ನು ಅನುಭವಿಸಬೇಕಾಯಿತು ಹಿಂದೆ ಆಗಿರುವ ನೋವು ಸೋಲುಗಳನ್ನು ಬಿಟ್ಟು ಮುಂದೆ ಎಚ್ಚರಿಕೆಯಿಂದ ಪಕ್ಷವನ್ನು ಕಟ್ಟೋಣ ಹೋಬಳಿ ಮಟ್ಟದಲ್ಲಿ ಸಭೆಗಳನ್ನು ಮಾಡಿ ಅ ಮೂಲಕ ಸಮಿತಿಗಳನ್ನು ಆಯ್ಕೆ ಮಾಡುವುದು ಸೂಕ್ತ ಎಂದರು.

ಈ ಸಂದರ್ಭದಲ್ಲಿ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಜೆಡಿಎಸ್‌ ಪಕ್ಷದ ಚಿಹ್ನೆಯಲ್ಲಿ ಗೆದ್ದು ಬೇರೆ ಪಕ್ಷಕ್ಕೆ ಹೋದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಜಿಲ್ಲಾ ಕೇಂದ್ರದಲ್ಲಿ ಪಕ್ಷದ ಕಛೇರಿ ಕಟ್ಟಲು ಮುಂದಾಗಬೇಕು ಮೈತ್ರಿ ಪಕ್ಷಗಳ ಜಂಟಿ ಸಭೆ ಮಾಡಬೇಕು ಸಹಕಾರಿ ಸಂಘಗಳ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ಬಿಡಬೇಕು ಚುನಾವಣೆಯಲ್ಲಿ ಬೂತ್ ಗಳಲ್ಲಿ ವೋಟ್ ಹಾಕಿಸುವವರನ್ಮು ಗುರುತಿಸಬೇಕು ಕೇವಲ ಸಭೆಗಳಲ್ಲಿ ಭಾಷಣ ಮಾಡುವವರನ್ನು ಅಲ್ಲ ಪಕ್ಷದ ಸಿದ್ದಾಂತದಂತೆ ಒಬ್ಬರಿಗೆ ಒಂದು ಹುದ್ದೆ ಜಾರಿ ಮಾಡಿಸಬೇಕು ಎಂದು ನಾಯಕರನ್ನು ಒತ್ತಾಯಿಸಿದರು.

ಸಭೆಯ ಅಧ್ಯಕ್ಷೆ ವಹಿಸದ್ದ ಜೆಡಿಎಸ್‌ ತಾಲೂಕು ಅಧ್ಯಕ್ಷ ಬಾಬು ಮೌನಿ ಮಾತನಾಡಿ, ಚುನಾವಣೆಯಲ್ಲಿ ಗೆಲ್ಲಲು ಗ್ರಾಮಗಳಲ್ಲಿ ಸದಸ್ಯತ್ವ ಮಾಡಿಸಿ ಪ್ರತಿ ಹೋಬಳಿ ಮಟ್ಟದಲ್ಲಿ ಘಟಕಗಳನ್ನು ರಚನೆ ಮಾಡಲಾಗುತ್ತದೆ ಪಕ್ಷದಲ್ಲಿ ಸುಮಾರು 21 ವಿವಿಧ ವಿಭಾಗಗಳ ಸಮಿತಿಗಳನ್ನು ರಚಿಸಲಾಗುತ್ತದೆ ಎಲ್ಲರಿಗೂ ಅವಕಾಶವಿದ್ದು ಪಕ್ಷದ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸುವಂತೆ ತಿಳಿಸಿದರು.

ಸಭೆಯಲ್ಲಿ ಮಾಜಿ ಜಿಪಂ ಸದಸ್ಯ ಬಾಲಾಜಿ ಚನ್ನಯ್ಯ, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ತಾಲೂಕು ಕಾರ್ಯಾಧ್ಯಕ್ಷ ಜನಪನಹಳ್ಳಿ ಆನಂದ್, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಯಲವಾರ ಸೊಣ್ಣೇಗೌಡ, ಮೂರಂಡಹಳ್ಳಿ ಗೋಪಾಲಪ್ಪ, ಮುಖಂಡರಾದ ಪುಸ್ಥಿ ನಾರಾಯಣಸ್ವಾಮಿ, ಖಾಜಿಕಲ್ಲಹಳ್ಳಿ ಹರೀಶ್, ಮುನಿಸ್ವಾಮಿಗೌಡ, ಮೀನಾಕ್ಷಿ, ರತ್ನಮ್ಮ, ಲೋಕೇಶ್ ಮರಿಯಪ್ಪ, ವಿ.ಕೆ ರಾಜೇಶ್, ಗಿರೀಶ್, ಜೆಟ್ ಅಶೋಕ್, ವಿಜಯ್ ಗೌಡ, ಮುಂತಾದವರು ಇದ್ದರು.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

26 minutes ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

3 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

6 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

18 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

21 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

24 hours ago