ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ನಾಗಮ್ಮ ಮತ್ತು ಅವರ ಬೆಂಬಲಿಗರು ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.
ತಾಲೂಕಿನ ತೂಬಗೆರೆ ಬಿಜೆಪಿ ಕಚೇರಿಯಲ್ಲಿ ನಾಗಮ್ಮ ಮತ್ತು ಅವರ ಬೆಂಬಲಿಗಾರದ ನೂರಕ್ಕೂ ಹೆಚ್ಚು ಮಹಿಳೆಯರು ಸೇರ್ಪಡೆಯಾದರು.
ಬಳಿಕ ಮಾತನಾಡಿದ ಅವರು, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ಕಳೆದ 5 ವರ್ಷಗಳಲ್ಲಿ ಈ ಭಾಗಕ್ಕೆ ಮೂಲ ಸೌಕರ್ಯಗಳನ್ನು ಒದಗಿಸದೇ ಕಡೆಗಣಿಸಿದ್ದಾರೆ. ಇದರಿಂದ ಬೇಸತ್ತು ನಾನು ಮತ್ತು ಪಕ್ಷದ ಬೆಂಬಲಿಗರು ಬಿಜೆಪಿ ಸಿದ್ಧಾಂತ ಒಪ್ಪಿ, ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇವೆ ಎಂದು ಹೇಳಿದರು.
ವಕೀಲ ಪ್ರತಾಪ್ ಮಾತನಾಡಿ, ನಮ್ಮ ಪಕ್ಷಕ್ಕೆ ಬರುವವರು ನಮ್ಮ ಸಿದ್ಧಾಂತ ಒಪ್ಪಿ ಬಂದರೆ ಅವರಿಗೆ ಸಂಪೂರ್ಣ ಸಹಕಾರ ಕೊಡುತ್ತೇವೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಒಳ್ಳೆಯ ವ್ಯಕ್ತಿ ಎಂದರೆ ಪಿಳ್ಳ ಮುನಿಶಾಮಪ್ಪ. ಅವರು ಕಳೆದ ಐದು ವರ್ಷಗಳಲ್ಲಿ ಪ್ರತಿ ಗ್ರಾಮದಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಅವರಿಗೆ ನಿಮ್ಮ ಅಮೂಲ್ಯ ಮತಗಳನ್ನು ನೀಡಬೇಕು. ಎಲ್ಲಾ ಗ್ರಾಮಗಳಿಗೆ ತೆರಳಿ ಬಿಜೆಪಿಗೆ ಮತ ನೀಡಬೇಕೆಂದು ಪ್ರಚಾರ ಮಾಡಬೇಕು. ಆಗ ಮಾತ್ರ ಬಿಜೆಪಿ ಗೆಲ್ಲಲು ಸಾಧ್ಯವಾಗುತ್ತದೆ ಎಂದರು.
ಇಂದು ನಮ್ಮ ಕಚೇರಿಯಲ್ಲಿ ಜೆಡಿಎಸ್ ಪಕ್ಷದಲ್ಲೇ ಸುಮಾರು ವರ್ಷಗಳಿಂದ ಇದ್ದು, ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ತುಂಬಾ ಸಂತೋಷದ ವಿಷಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತೂಬಗೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಸುರೇಶ್ ಬಾಬು, ಆನಂದ್, ಸದಸ್ಯ ಗಂಗರಾಜು, ಕೃಷ್ಣಪ್ಪ, ತೂಬಗೆರೆ ಹೋಬಳಿ ಬಿಜೆಪಿ ಅಧ್ಯಕ್ಷ ವಾಸುದೇವ್ ಹಾಗೂ ಪೆರಮಗೊಂಡಹಳ್ಳಿ ಗ್ರಾಮದ ಮಹಿಳೆಯರು, ಯುವಕರು ಹಾಜರಿದ್ದರು.