ಕರ್ನಾಟಕ ರಾಜ್ಯದ ಉದ್ದಗಲಕ್ಕೂ ಜೆಡಿಎಸ್ ಪಕ್ಷ ಕೈಗೊಂಡಿದ್ದ ಬರ ಅಧ್ಯಯನ ವರದಿಯನ್ನು ರಾಜ್ಯಪಾಲರಾದ ಥಾವರಚಂದ್ ಗೆಹಲೋತ್ ಅವರಿಗೆ ರಾಜಭವನದಲ್ಲಿ ಸಲ್ಲಿಸಲಾಯಿತು.
ಈ ವೇಳೆ ರಾಜ್ಯ ಎದುರಿಸುತ್ತಿರುವ ತೀವ್ರ ಬರ ಪರಿಸ್ಥಿತಿಯನ್ನ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡಲಾಯಿತಲ್ಲದೆ; ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕಾರ್ಯಗಳಿಗೆ ತುರ್ತು ಅನುದಾನ ಬಿಡುಗಡೆ ಮಾಡಿಸಲು ತಕ್ಷಣವೇ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ಪಕ್ಷದ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾಧ್ಯಕ್ಷರು ಹಾಜರಿದ್ದರು.