ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ದುರಾಡಳಿತ, ಬೇಜವಾಬ್ದಾರಿತನದಿಂದ ಬೇಸತ್ತು ಇಂದು ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸಿದ್ಧಾಂತ, ಆಡಳಿತ ವೈಖರಿ ಒಪ್ಪಿ ಪಕ್ಷ ಸೇರ್ಪಡೆಗೊಂಡಿರುವುದು ಪಕ್ಷ ಬಲಿಷ್ಠವಾಗಲು ಇನ್ನಷ್ಟು ಪುಷ್ಠಿ ನೀಡಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ ತಿಳಿಸಿದರು.
ಇಂದು ನಗರದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನದಲ್ಲಿ ಅಳವಡಿಸಿದ್ದ ಮೀಸಲಾತಿಯನ್ನು ತೆಗೆಯುವುದಕ್ಕೆ ಹೊರಟಿರುವ ಬಿಜೆಪಿ ಸರ್ಕಾರ ನಡೆ ಖಂಡಿಸಿ ಕಾಂಗ್ರೆಸ್ ಪಕ್ಷವನ್ನ ಸೇರಿದ್ದಾರೆ.
ಬಿಜೆಪಿಯ ಸುಳ್ಳು ಭರವಸೆ, ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಾ ಬಂದಿದೆ ಎಂದು ಆರೋಪ ಮಾಡಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ನ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಇಷ್ಟರ್ ಅಹಮದ್ ಪಚೋಡಿ ವಾಲಾ, ನಗರ ಬಿಜೆಪಿಯ ಅಧ್ಯಕ್ಷ ಇನ್ಯತ್ ಆದಿಲ್ ಭಕ್ಷು ಶಹಿಂಸಾ ಸಿಕಂದರ್ ಪಾಷಾ ಮತ್ತು ಸಂಗಡಿಗರು, ಸಿರಾಜ್ ಪಾಷಾ, ಅಸ್ಲಾಂ ಪಾಶ ಮತ್ತು 300ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…