Categories: ಕೋಲಾರ

ಜೆಡಿಎಸ್‌-ಬಿಜೆಪಿ ಅಧಿಕಾರದ ಆಸೆಗಾಗಿ ಮೈತ್ರಿಯಾಗಿದೆ- ಡಾ.ಎಂ.ಸಿ‌ ಸುಧಾಕರ್

ಕೋಲಾರ: ರಾಜ್ಯದ ಜನರ ಅಭಿವೃದ್ಧಿಯ ಬಗ್ಗೆ ಚಿಂತೆ ಇಲ್ಲ ಕೇವಲ ಅಧಿಕಾರದ ಆಸೆಗಾಗಿ ಜೆಡಿಎಸ್ ಪಕ್ಷವು ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ರಾಜ್ಯದ ಜನರನ್ನು ಮತ್ತೊಮ್ಮೆ ಯಾಮಾರಿಸಲು ಜೆಡಿಎಸ್‌-ಬಿಜೆಪಿ ಎರಡು ಪಕ್ಷಗಳು ಮುಂದಾಗಿವೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್ ಆರೋಪಿಸಿದರು.

ತಾಲ್ಲೂಕಿನ ಕ್ಯಾಲನೂರು ಗ್ರಾಮದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಕೆ.ವಿ ಗೌತಮ್ ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜೆಡಿಎಸ್‌ ಪಕ್ಷವು ಹೆಸರಿಗೆ ಮಾತ್ರ ಜಾತ್ಯಾತೀತ ಪಕ್ಷ ಮತದಾರರನ್ನು ಇಷ್ಟು ವರ್ಷ ಯಾಮಾರಿಸಿದ್ದು ಸಾಕು ಮತದಾರರು ಇನ್ನೂ ಮುಂದೆಯಾದರೂ ಎಚ್ಚರಿಕೆಯಿಂದ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಟ್ಟು ಎಲ್ಲಾ ಜಾತಿ ಸಮುದಾಯಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸುವ ಮೂಲಕ ಕೆ.ವಿ ಗೌತಮ್ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷಗಳಿಂದ ದೇಶದ ಜನರನ್ನು ಕೇವಲ ಭರವಸೆಗಳನ್ನು ಅಷ್ಟೇ ನೀಡಿದ್ದಾರೆ ಅವುಗಳನ್ನು ಜಾರಿ ಮಾಡಿಲ್ಲ ಆದರೆ ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಪಕ್ಷವು ಚುನಾವಣೆಯ ಪೂರ್ವದಲ್ಲಿ ಘೋಷಣೆ ಮಾಡಿದ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ತಕ್ಷಣವೇ ಜಾರಿ ಮಾಡಿದ್ದಾರೆ ಅದರಿಂದ ಕಾಂಗ್ರೆಸ್ ಬೆಂಬಲಿಸಿ ದೇಶವನ್ನು ಉಳಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ ಮುಂದಿನ ದಿನಗಳಲ್ಲಿ ಕ್ಯಾಲನೂರು ಗ್ರಾಮವನ್ನು ಹೋಬಳಿ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸುವ ಚಿಂತನೆ ಮಾಡಲಾಗಿದೆ ಈಗಾಗಲೇ ನಿಮ್ಮ ಒಂದು ಗ್ರಾಮಕ್ಕೆ ಸುಮಾರು 16.5 ಕೋಟಿ ಅನುದಾನವನ್ನು ತರಲಾಗಿದೆ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ಸರಕಾರವು ಯಾವಾಗಲೂ ಮುಂದೆ ಇರುತ್ತದೆ ತಾಲ್ಲೂಕಿನ ಜನತೆಗೆ ರಾಜ್ಯ ಸರ್ಕಾರದ ಅಭಿವೃದ್ದಿ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಜನರ ಮಧ್ಯದಲ್ಲೇ ಇದ್ದು ಎಲ್ಲಾ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸಿದ್ದೇವೆ ಎಂದರು.

ಕಾಂಗ್ರೆಸ್ ಸರಕಾರವು ಇದ್ದ ಸಂದರ್ಭದಲ್ಲಿ ಕೆ.ಸಿ ವ್ಯಾಲಿ ನೀರನ್ನು ತಂದು ಜಿಲ್ಲೆಯ ಅಂತರ್ಜಲ ಮಟ್ಟವನ್ನು ಏರಿಕೆ ಮಾಡಲಾಗಿದೆ ಬರಗಾಲ ರಾಜ್ಯದಲ್ಲಿ‌ ಉಂಟಾಗಿದ್ದರೂ ನೀರಿನ ಸಮಸ್ಯೆ ಕೋಲಾರದಲ್ಲಿ ಉಂಟಾಗಿಲ್ಲ ಎತ್ತಿನ ಹೊಳೆ ನೀರನ್ನು ಕೋಲಾರ ಜಿಲ್ಲೆಗೆ ತರುವುತ್ತೇವೆ ಕೊಟ್ಟು ಮಾತನ್ನು ಉಳಿಸಿಕೊಳ್ಳತ್ತೇವೆ ಎಂದರು.

ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಮೈತ್ರಿಯಾಗಿದ್ದು ನಾವೆಲ್ಲರೂ ಹುಷಾರಾಗಿರಬೇಕು ತೆನೆ ಗದ್ದೆಯಲ್ಲಿ ಇರಬೇಕು, ಕಮಲ ಕೆಸರಿನಲ್ಲಿರಬೇಕು ಕೈ ಅಧಿಕಾರದಲ್ಲಿ ಇರಬೇಕು ಹಾಗಾಗಿ ಪ್ರತಿಯೊಬ್ಬರು ಕೆ.ವಿ ಗೌತಮ್ ಅವರನ್ನು ಬೆಂಬಲಿಸಿ ಹೆಚ್ಚು ಮತಗಳಿಂದ ಗೆಲ್ಲಿಸಿ ದೆಹಲಿಗೆ ಕಳುಹಿಸುವಲ್ಲಿ ತಾವೆಲ್ಲಾ ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಎಂಎಲ್ ಸಿ ಎಂ. ಎಲ್ ಅನಿಲ್ ಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಮುಖಂಡರಾದ ನಾಗನಾಳ ಸೋಮಣ್ಣ, ಮುನಿಅಂಜಪ್ಪ, ವಕ್ಕಲೇರಿ ರಾಜಪ್ಪ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಕೆ.ವಿ ದಯಾನಂದ್, ಚಂಜಿಮಲೆ ರಮೇಶ್, ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ನಾಗೇಶ್, ಚೌಡರೆಡ್ಡಿ, ಬಾಬಾ ಸಾಬ್, ತಮೀಮ್, ಪ್ರಕಾಶ್, ಮದ್ದೇರಿ ಶ್ರೀನಿವಾಸ್, ಕಿಟ್ಟಿ, ಮುಂತಾದವರು ಇದ್ದರು

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

3 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

18 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago