ಚಿಕ್ಕಬಳ್ಳಾಪುರ : ಜೆಡಿಎಸ್ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ಕೊಲೆ ಮಾಡಿರುವ ಘಟನೆ ಶುಕ್ರವಾರ (ಜ.03) ರಾತ್ರಿ 9.30 ರ ಆಸುಪಾಸಿನಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಶಿಡ್ಲಘಟ್ಟ ರಸ್ತೆಯ ತಮ್ಮನಾಯಕನಹಳ್ಳಿ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ.
ಕೊಲೆಗೀಡಾದ ವ್ಯಕ್ತಿಯನ್ನು ತಮ್ಮನಾಯಕನಹಳ್ಳಿ ಗ್ರಾಮದ ನಿವಾಸಿ ವೆಂಕಟೇಶ್ ಅಲಿಯಾಸ್ ವಾಚ್ ವೆಂಕಟೇಶ್ ಎಂದು ಗುರುತಿಸಲಾಗಿದೆ.
ಕೂಡಲೇ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ವೆಂಕಟೇಶ್ ಸಣ್ಣ ಪುಟ್ಟದಾಗಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಶ್ವಾನದಳ ಬೆರಳಚ್ಚು ತಜ್ಞರು ಭೇಟಿ ನೀಡಿ ತಪಾಸನೆ ನಡೆಸಿದ್ದಾರೆ. ಜೊತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.