ಜೆಡಿಎಸ್ ಮುಖಂಡ ವೆಂಕಟೇಶ್ ಹತ್ಯೆ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

ಚಿಕ್ಕಬಳ್ಳಾಪುರದಲ್ಲಿ ನಡೆದ ಜೆಡಿಎಸ್ ಮುಖಂಡ ಎನ್. ವೆಂಕಟೇಶ್ ಅವರ ಬರ್ಬರ ಹತ್ಯೆ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಧನು ಅಲಿಯಾಸ್ ಧನರಾಜ್ ಹಾಗೂ ಆತನ ಸಹಚರ ಸತೀಶ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಹತ್ಯೆ ನಡೆದ ದಿನವೆ, ವಿಕ್ಟಿಮ್ ವೆಂಕಟೇಶ್ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ, ಧನರಾಜ್ ಮತ್ತು ಸತೀಶ್ ಸ್ಕೂಟರ್ ಅಡ್ಡಗಟ್ಟಿ ಮೊದಲು ಹಂದಿ ಕೊಯ್ಯುವ ಚಾಕುವಿನಿಂದ ಬೆನ್ನಿಗೆ ಇರಿದಿದ್ದರು. ನಂತರ ಹೊಟ್ಟೆ ಹಾಗೂ ಮುಖದ ಭಾಗಕ್ಕೆ ಮೂರು ಬಾರಿ ಹಲ್ಲೆ ನಡೆಸಿದ್ದರು. ಕ್ರೌರ್ಯದಿಂದ ಕೈ ಕಟ್ ಮಾಡಿ, ಸ್ಥಳದಿಂದ ಪರಾರಿಯಾಗಿದ್ದರು.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಹತ್ಯೆಗೆ ಹಿಂದಿನ ಕಾರಣವಾಗಿ 2023ರ ಎಂಪಿ ಚುನಾವಣೆಯಲ್ಲಿ ನಡೆದ ಗಲಾಟೆ ಕಾರಣವಾಗಿರಬಹುದು. ಆ ಗಲಾಟೆಯ ಸಂದರ್ಭದಲ್ಲಿ ವೆಂಕಟೇಶ್, ಆರೋಪಿಗಳಾದ ಧನು, ಸತೀಶ್ ಹಾಗೂ ಇನ್ನೊಬ್ಬ ಅರವಿಂದ್ ಅವರನ್ನು ಹಿಗ್ಗಾಮುಗ್ಗಾ ಹೊಡೆದಿದ್ದರು. ಧನು ಪರವಾಗಿ ವೆಂಕಟೇಶ್‌ನ್ನು ರಾಜಿ ಮಾಡಲು ಹೋಗಿದ್ದ ಸತೀಶ್ ಕೂಡ ವೆಂಕಟೇಶ್ ಕೋಪಕ್ಕೆ ಗುರಿಯಾಗಿದ್ದ.

ವೇಂಕಟೇಶ್ ನಿರಂತರವಾಗಿ ಈ ಮೂರು ಮಂದಿಯನ್ನು ಒತ್ತಡಕ್ಕೊಳಪಡಿಸುತ್ತಿದ್ದು, “ನನ್ನ ವಿರುದ್ಧ ಏನು ದೂರು ಕೊಟ್ಟರೂ ನಿಮ್ಮಿಂದ ಏನೂ ಸಾಧ್ಯವಿಲ್ಲ” ಎಂಬ ಧೈರ್ಯವನ್ನು ಪ್ರದರ್ಶಿಸುತ್ತಿದ್ದರು. ಇದು ಸಹ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಪೊಲೀಸರು ಶಂಕಿಸುತ್ತಿದ್ದಾರೆ.

ಹತ್ಯೆಯ ನಂತರ ಧನು ಮತ್ತು ಸತೀಶ್ ಬೆಂಗಳೂರಿಗೆ ಓಡಿಹೋಗಿ, ಅಲ್ಲಿನ ಒಂದು ರೂಮಲ್ಲಿ ತಂಗಿದ್ದಾಗ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇಬ್ಬರನ್ನು ಈಗ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಇಡೀ ಪ್ರಕರಣದ ಹಿನ್ನೆಲೆಯನ್ನು ತಿಳಿಯಲು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

21 minutes ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

10 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

23 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago