ಜೆಡಿಎಸ್ ರೈತ ಸಾಂತ್ವನ ಯಾತ್ರೆ: ಯಾತ್ರೆಯ ವರದಿಯನ್ನ ಕೇಂದ್ರಕ್ಕೂ ಕಳುಹಿಸಿ ಪರಿಹಾರ ನೀಡುವಂತೆ ಒತ್ತಾಯ ಮಾಡಲಿ- ಸಿಎಂ‌ ಸಿದ್ದರಾಮಯ್ಯ

ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೆಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದು ತಿಳಿಸಿದ್ದಾರೆ.

ಹೊಸ ಬೆಳವಣಿಗೆಯಲ್ಲಿ ಸನ್ಮಾನ್ಯ ಹೆಚ್.ಡಿ.ಕುಮಾರಸ್ವಾಮಿ ಅವರು ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಜೊ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ ಎಂದರು‌.

ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು ರೂ.33,710 ಕೋಟಿ ಮೌಲ್ಯದ ಬೆಳೆಹಾನಿಯಾಗಿದೆ. ಕೇಂದ್ರದಿಂದ ರೂ.17,901 ಕೋಟಿ ಪರಿಹಾರಕ್ಕೆ ಮನವಿ ನೀಡಲಾಗಿದೆ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವೂ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಹೀಗಿದ್ದರೂ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯೂ ಇಲ್ಲ, ಅನುದಾನವೂ ಇಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಬರಪರಿಹಾರಕ್ಕಾಗಿ ಪ್ರಧಾನಮಂತ್ರಿ ಅವರಿಗೆ ಮನವಿ ಮಾಡಲು ನಮ್ಮ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧ ಇದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ, ಕೇಂದ್ರದ ಬಿಜೆಪಿ ನಾಯಕರು ಕೂಡಾ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಸನ್ಮಾನ್ಯ ಹೆಚ್.ಡಿ.ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು ಎಂದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

2 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

2 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

6 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

8 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

11 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

15 hours ago