
ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಪಾದಚಾರಿ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು 10 ಗಂಟೆ ಸಮಯದಲ್ಲಿ ತಾಲೂಕಿನ ಬಾಶೆಟ್ಟಿಹಳ್ಳಿ ಸಮೀಪದ ಜೆಪಿ ಪ್ಯಾಲೇಸ್ ಬಳಿ ನಡೆದಿದೆ.
ಉತ್ತರಪ್ರದೇಶ ರಾಜ್ಯದ ಕಲ್ಲುಚೌದ್ರಿ (28) ಮೃತ ದುರ್ದೈವಿ.
ಪಾದಚಾರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಕಾರು ಎಸ್ಕೇಪ್ ಆಗಿದೆ. ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ವಿಷಯ ತಿಳಿದ ಗ್ರಾಮಾಂತರ ಠಾಣಾ ಪೊಲೀಸರು ದೌಡಾಯಿಸಿ ಸ್ಥಳ ಪರೀಶಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ..