ತೋಟಗಾರಿಕೆ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಿಂದ 2025-26ನೇ ಸಾಲಿನ 3 ತಿಂಗಳ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಅರ್ಜಿಯನ್ನು ಜಿಲ್ಲಾ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು / ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಇಲಾಖೆಯ ಅಧಿಕೃತ ಜಾಲತಾಣ https://horticulturedir.karnataka.gov.in ಇದರಲ್ಲಿ ಅಕ್ಟೋಬರ್ 27 ರವರೆಗೆ ಡೌನ್ ಲೋಡ್ ಮಾಡಿಕೊಳ್ಳಬಹುದು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.20, ಪ.ಜಾತಿ ಅಥವಾ ಪಂಗಡದ ಅಭ್ಯರ್ಥಿಗಳಿಗೆ ರೂ.10,
ಅರ್ಜಿ ಶುಲ್ಕವಿದ್ದು, ಇಂಡಿಯನ್ ಪೋಸ್ಟ್ ಲ್ ಆರ್ಡರ್/ ಡಿಡಿ ಯನ್ನು ಜಂಟಿ ನಿರ್ದೇಶಕರು/ ಹಿರಿಯ ಸಹಾಯಕ ನಿರ್ದೇಶಕರ ಹೆಸರಿನಲ್ಲಿ ಪಡೆದು ಅರ್ಜಿಯ ಜೊತೆಗೆ ಲಗತ್ತಿಸಬೇಕು.
ಜೇನುಗಾರಿಕೆ ತರಬೇತಿಗೆ ಕನಿಷ್ಠ ಎಸ್.ಎಸ್.ಎಲ್.ಸಿ ಯನ್ನು ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿದ್ದು, ಪಹಣಿಯನ್ನು ಹೊಂದಿರಬೇಕು. ಅರ್ಜಿದಾರರು ವಯೋಮಿತಿ 18-35 ವರ್ಷ ವಾಗಿರಬೇಕು. ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜಂಟಿ ನಿರ್ದೇಶಕರು ಅಥವಾ ಹಿರಿಯ ಸಹಾಯಕ ನಿರ್ದೇಶಕರು ದೂ.ಸಂಖ್ಯೆ:8660409618, ಹಿರಿಯ ಸಹಾಯಕ ನಿರ್ದೇಶಕರು ದೇವನಹಳ್ಳಿ ತಾಲ್ಲೂಕು 9480461234, ದೊಡ್ಡಬಳ್ಳಾಪುರ ತಾಲ್ಲೂಕು 9482129648, ಹೊಸಕೋಟೆ ತಾಲ್ಲೂಕು 9880210892, ನೆಲಮಂಗಲ ತಾಲ್ಲೂಕು 98804461607 ಗೆ ಸಂಪರ್ಕಸಬಹುದು ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…