ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸೌಕರ್ಯಗಳು ಸಿಗದೇ ಇರುವುದು ಕಂಡುಬಂದಿದೆ. ಸವಲತ್ತು ಇಲ್ಲದೇ ಇರುವುದರಿಂದ ದರ್ಶನ್ ಹೈರಾಣವಾಗಿ ಹೊಗಿದ್ದಾರೆ. ಈ ಕಾರಣದಿಂದಲೇ ದರ್ಶನ್ ಇಂದು ನ್ಯಾಯಾಧೀಶರ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ‘ನನಗೆ ವಿಷ ನೀಡಲು ಆದೇಶಿಸಿ’ ಎಂದು ಜಡ್ಜ್ ಎದರೇ ಕೇಳಿದ್ದಾರೆ. ದರ್ಶನ್ ಬೇಡಿಕೆ ಕೇಳಿ ಒಮ್ಮೆ ಶಾಕ್ ಆದ ಜಡ್ಜ್, ‘ಹಾಗೆಲ್ಲ ಕೇಳಬಾರದು’ ಎಂದು ದರ್ಶನ್ಗೆ ಕಿವಿಮಾತು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಕಳೆದ ವರ್ಷ ಬಂಧನವಾಗಿದ್ದರು. ಆ ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು. ಸುಪ್ರೀಂಕೋರ್ಟ್ ದರ್ಶನ್ ಅವರ ಜಾಮೀನನ್ನು ರದ್ದು ಮಾಡಿತು. ಅಲ್ಲದೆ, ಅವರಿಗೆ ಯಾವುದೇ ವಿಶೇಷ ಸವಲತ್ತು ಸಿಗಬಾರದು ಎಂದು ಎಚ್ಚರಿಸಿತ್ತು.
ಹೀಗಾಗಿ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರನ್ನು ಇಡಲಾಗಿದೆ. ವಿಶೇಷ ಸವಲತ್ತು ಸಿಗದಂತೆ ನೋಡಿಕೊಳ್ಳಲಾಗುತ್ತಿದೆ. ಅಲ್ಲಿನ ಕಠಿಣ ನಿಯಮಗಳಿಂದ ಅವರಿಗೆ ನರಕಯಾತನೆ ಉಂಟಾಗುತ್ತಿದೆ.
ಹೆಚ್ಚುವರಿ ದಿಂಬು ಹಾಗೂ ಬೇಡ್ಶೀಟ್ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ಆಗ ಅವರು, ಮೊದಲಿಗೆ ಕೈ ಎತ್ತಿ ‘ಒಂದು ಮನವಿ ಇದೆ’ ಎಂದು ಹೇಳಿದ್ದಾರೆ. ಮನವಿ ಏನು ಎಂದು ಕೇಳಿದಾಗ, ದರ್ಶನ್ ಕೊಟ್ಟ ಉತ್ತರ ಜಡ್ಜ್ಗೆ ಶಾಕ್ ತಂದಿದೆ.
ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್ನಿಂದಲೇ ಈ ಆದೇಶ ನೀಡಬೇಕು ಎಂದು ದರ್ಶನ್ ಮನವಿ ಮಾಡಿದ್ದಾರೆ. ಆಗ ನ್ಯಾಯಾಧೀಶರು ಹಾಗೆಲ್ಲಾ ನೀವು ಕೇಳುವಂತಿಲ್ಲ ಎಂದು ಹೇಳಿದ್ದಾರೆ.
ಜೈಲು ಅಧಿಕಾರಿಗಳಿಗೆ ಯಾವ ಆದೇಶ ನೀಡಬೇಕೋ ನೀಡುತ್ತೇವೆ. ನಿಮ್ಮ ಮನವಿ ಬಗ್ಗೆ ಮಧ್ಯಾಹ್ನ ಆದೇಶ ನೀಡುತ್ತೇವೆ ಎಂದು ವಿಚಾರಣೆಯನ್ನು 3 ಗಂಟೆಗೆ ಮುಂದೂಡಿದ್ದಾರೆ.
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…