
ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸಾಮೂಹಿಕ ಯೋಗಾಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರಾಗೃಹದಲ್ಲಿರುವ ಎಲ್ಲಾ ಕೈದಿಗಳಿಗಾಗಿ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಹಾಗೂ ಅವರ ಸಹಚರರು ಭಾಗವಹಿಸಿ ಗಮನ ಸೆಳೆದರು.
ಜೈಲಿನಲ್ಲಿರುವ ಇತರೆ ಕೈದಿಗಳೊಂದಿಗೆ ಅವರು ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಿದ ದೃಶ್ಯಗಳು ಗಮನ ಸೆಳೆದವು.
ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕಾರಾಗೃಹದಲ್ಲಿ ಕೈದಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.