Categories: ಲೇಖನ

ಜೈಲು, ಸ್ವಾತಂತ್ರ್ಯ ಮತ್ತು ನನ್ನ ಗುಡಿಸಲು….

ಬೆಳಗ್ಗೆ 5 ಗಂಟೆಗೆ ಎದ್ದು ಸುಮಾರು 6 ಕಿಲೋ ಮೀಟರ್ ನಷ್ಟು ದೂರ ನಡೆದು ಅಲ್ಲಿ ಒಂದು ತೋಟದ ಮನೆಯಲ್ಲಿ ಬೇಕಾಬಿಟ್ಟಿ ಬೆಳದಿದ್ದ ಕಳೆ ಗಿಡಗಳನ್ನು ಕತ್ತರಿಸಿ ರಾಶಿ ಮಾಡಿ ಒಂದು ಕಡೆ ಗುಡ್ಡೆ ಹಾಕಿ ಮನೆಯ ಯಜಮಾನಿ ಕೊಟ್ಟ ಮಜ್ಜಿಗೆ ಕುಡಿದು ಮತ್ತೆ ಇನ್ನೊಂದಿಷ್ಟು ಬೇರೆ ಬೇರೆ ಕೆಲಸ ಮಾಡಿ ಈಗ ತಾನೇ ಮಧ್ಯಾಹ್ನದ ಈ ಹೊತ್ತಿಗೆ ಮನೆ ತಲುಪಿದ್ದೇನೆ…….

ನನ್ನ ಹೆಂಡತಿ ಮಣ್ಣಿನ ಮಡಿಕೆಯಲ್ಲಿ ಕೆಂಪು ಅಕ್ಕಿಯ ಗಂಜಿ ಮಾಡಿ ಮನೆಯಲ್ಲಿಯೇ ಮಾಡಿದ ಮಾವಿನ ಮಿಡಿಯ ಉಪ್ಪಿನಕಾಯಿ ಹಾಕಿ ತಟ್ಟೆಯಲ್ಲಿ ಇಟ್ಟಿದ್ದಾಳೆ. ಅದನ್ನು ಈಗ ತಾನೆ ಉಣ್ಣುತ್ತಿದ್ದೇನೆ. ಮನೆಯಲ್ಲಿದ್ದ ಹಳೆಯ ಟಿವಿಯಲ್ಲಿ ಏನೇನೋ ಸುದ್ದಿಗಳು ಬರುತ್ತಿತ್ತು……

ಕನ್ನಡ ಚಿತ್ರರಂಗದ ಬಾಕ್ಸ್ ಆಫೀಸ್ ಸುಲ್ತಾನ್ ಎನ್ನುವ ಬಿರುದಾಂಕಿತ ದರ್ಶನ್ ಎಂಬ ನಟ, ಆತನ ಗೆಳತಿ ಪವಿತ್ರ ಗೌಡ ಎಂಬ ನಟಿ, ಹಾಸನದ ಮಾಜಿ ಪ್ರಧಾನಿಗಳ ಮೊಮ್ಮಗ ಮತ್ತು ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಎಂಬ ಯುವ ರಾಜಕಾರಣಿ ಮತ್ತು ಆತನ ಅಣ್ಣ ಹಾಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಜೈಲಿನಲ್ಲಿ ಬಂಧಿಗಳಾಗಿದ್ದಾರೆ ಎಂದೇನೋ ಸುದ್ದಿ ಬರುತ್ತಿತ್ತು. ಹಾಗೆಯೇ ಮಾಜಿ ಸಚಿವ ನಾಗೇಂದ್ರ ಮತ್ತು ಹಾಲಿ ಶಾಸಕ ಬಸವನಗೌಡ ದದ್ದಲ್ ಅವರ ಮೇಲೆ ಇಡಿ ದಾಳಿ ನಡೆಸಿ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದೇನೂ ಹೇಳುತ್ತಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂಡ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುದ್ದಿಯೂ ಪ್ರಸಾರವಾಗುತ್ತಿತ್ತು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೇಲೆ ಪೋಕ್ಸೋ ಪ್ರಕರಣದ ಆರೋಪಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆ ಆಯಿತು ಎಂದೂ ಹೇಳುತ್ತಿದ್ದರು…….

ಕೆಂಪು ಅಕ್ಕಿಯ ಗಂಜಿ ಮತ್ತು ಉಪ್ಪಿನಕಾಯಿಯೊಂದಿಗೆ ಸವಿಯುತ್ತಿರುವಾಗ ಇದೆಲ್ಲವೂ ನನ್ನ ಮನಸ್ಸಿನಲ್ಲಿ ಒಂದು ರೀತಿಯ ಭಾವನೆಗಳ ತಾಕಲಾಟ ಪ್ರಾರಂಭವಾಯಿತು. ನನ್ನ ಬಳಿ ಇರುವುದು ಕಾಲು ಚಾಚುವಷ್ಟು ಮಾತ್ರ ಜಾಗದ ಒಂದು ಗುಡಿಸಲು, ಪತ್ನಿ ಮತ್ತು ಅಂಗನವಾಡಿ ಶಾಲೆಗೆ ಹೋಗಿರುವ ಎಂಟು ವರ್ಷದ ಮಗು ಇದೆ‌. ನಮ್ಮ ಬಳಿ ಎಲ್ಲಾ ಮೂಲೆಗಳನ್ನು ಹುಡುಕಾಡಿದರು ಸುಮಾರು ನಾಲ್ಕೈದು ಸಾವಿರ ಹಣ ಸಿಗುವುದು ಸಹ ಕಷ್ಟ. ಹೊಸ ಬಟ್ಟೆಗಳು ಅಪರೂಪ. ಸಿನಿಮಾ, ಹೊರ ಪ್ರಯಾಣ, ಶುಭಕಾರ್ಯಗಳು ಇಲ್ಲವೇ ಇಲ್ಲ ಎನ್ನುವಷ್ಟು ಅಪರೂಪ. ಹೇಗೋ ಜೀವನ ಸಾಗುತ್ತಿದೆ……

ಆದರೆ ಈಗ ಜೈಲಿನಲ್ಲಿರುವ ಮತ್ತು ಆರೋಪ ಹೊತ್ತಿರುವ ಅನೇಕರು ನೂರಾರು ಕೋಟಿಗಳ ಒಡೆಯರು, ಅತ್ಯಂತ ಜನಪ್ರಿಯ ವ್ಯಕ್ತಿಗಳು, ಅಧಿಕಾರದ ಮುಖ್ಯ ಸ್ಥಾನದಲ್ಲಿರುವವರು. ಇಂತಹವರು ಜೈಲಿನಲ್ಲಿ ಬಂಧಿಗಳು. ನಾವು ಗುಡಿಸಲಿನ ಸ್ವತಂತ್ರ ಹಕ್ಕಿಗಳು. ಇದೇನಿದು ವಿಚಿತ್ರ. ಅವರೆಲ್ಲರೂ ಅತಿ ಹೆಚ್ಚು ಓದಿದವರು, ಸಂವಿಧಾನ, ಕಾನೂನುಗಳ ಬಗ್ಗೆ ತಿಳಿವಳಿಕೆ ಇರುವವರು. ಇತರರಿಗೆ ಮಾರ್ಗದರ್ಶನ ಮಾಡುವ ಸ್ಥಿತಿಯಲ್ಲಿರುವವರು…..

ನಮಗೆ ಸಹಿ ಹಾಕುವುದಷ್ಟೇ ಗೊತ್ತು. ನಮ್ಮನ್ನು ಗಮನಿಸುವವರು ಸಹ ಯಾರೂ ಇಲ್ಲ. ನಮಗೆ ಕಾನೂನಿನ ತಿಳುವಳಿಕೆಯೂ ಇಲ್ಲ. ಆದರೆ ಇನ್ನೊಬ್ಬರಿಗೆ ಮೋಸ ಮಾಡಬಾರದು, ವಂಚನೆ ಮಾಡಬಾರದು, ಅಧಿಕಾರವನ್ನು, ಹಣವನ್ನು ದುರುಪಯೋಗ ಪಡಿಸಿಕೊಳ್ಳಬಾರದು, ಮಹಿಳೆಯರನ್ನು ನಿಂದಿಸಬಾರದು ಎನ್ನುವ ಸಣ್ಣ ಅರಿವು ಹೊರತುಪಡಿಸಿ ಯಾವ ಅಕ್ಷರ ಜ್ಞಾನವೂ ಇಲ್ಲ…….

ಆದರೆ ಈ ಎಲ್ಲವನ್ನೂ ಬಲ್ಲ
ಇವರೇಕೆ ಜೈಲಿಗೆ ಹೋಗುವ ಆರೋಪಕ್ಕೆ ಗುರಿಯಾಗುವಂತ ತಪ್ಪುಗಳನ್ನು ಮಾಡುತ್ತಾರೆ ಎಂದು ಆಶ್ಚರ್ಯವಾಗುತ್ತದೆ. ಒಂದಷ್ಟು ಸಾಮಾನ್ಯ ಜ್ಞಾನ ಸರಿ ತಪ್ಪುಗಳನ್ನ ನಮಗೆ ಅರ್ಥ ಮಾಡಿಸುತ್ತದೆ. ಅಷ್ಟೊಂದು ಸರಳವಾಗಿರುವ ವಿಷಯವನ್ನು ಇಷ್ಟೊಂದು ಪ್ರಖ್ಯಾತರು, ದೊಡ್ಡ ಮನುಷ್ಯರು, ಶ್ರೀಮಂತರು ಏಕೆ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬ ವಿಚಿತ್ರ ಆಶ್ಚರ್ಯ ನನ್ನನ್ನು ಕಾಡುತ್ತದೆ…..

ಅಕ್ಷರ ಜ್ಞಾನವನ್ನು, ಹಣ ಅಧಿಕಾರವನ್ನು, ಜನಪ್ರಿಯತೆಯನ್ನು, ಸುಖಭೋಗಗಳನ್ನು ಪಡೆದ ವ್ಯಕ್ತಿ ಹೆಚ್ಚು ಹೆಚ್ಚು ನಾಗರಿಕನಾಗುತ್ತಾನೆ ಎಂಬುದು ಸಹಜವಾದ ಬೆಳವಣಿಗೆ ಆಗಬೇಕಿತ್ತು. ಆದರೆ ಇವರುಗಳು ಕೇವಲ ಅನಾಗರಿಕರು ಮಾತ್ರವಲ್ಲ ಕ್ರಿಮಿನಲ್ ಗಳಾಗಿ ಪರಿವರ್ತನೆ ಹೊಂದುತ್ತಿರುವುದು ಆಧುನಿಕ ಕಾಲದ ದುರಂತ…..

ಕೋಟಿಗಟ್ಟಲೆ ಬೆಲೆಬಾಳುವ ಕಾರಿನ ಒಡೆಯರು ಅಪಘಾತ ಮಾಡಿ ದುರಹಂಕಾರದಿಂದ ವರ್ತಿಸಿ ಅನೇಕರ ಸಾವಿಗೆ ಕಾರಣರಾಗುತ್ತಿದ್ದಾರೆ. ಕಷ್ಟಪಟ್ಟು ದುಡಿಯದೇ, ಓದದೆ ಮೋಸ ಮಾಡಿ, ಪರೀಕ್ಷೆಗಳನ್ನು ಪಾಸು ಮಾಡಿ, ಉದ್ಯೋಗ ಹಿಡಿಯುತ್ತಿದ್ದಾರೆ. ಕೊನೆಗೊಂದು ದಿನ ಕೆಲವರು ಪೊಲೀಸರ ಕೈಗೆ ಸಿಕ್ಕಿ ಜೈಲು ಪಾಲಾಗುತ್ತಿದ್ದಾ.ರೆ ಇದನ್ನೇ ವಿಚಿತ್ರವಿಶ್ವ ಎಂದು ಕರೆಯೋಣವೇ……

ಉದಾಹರಣೆಗೆ,
ದರ್ಶನ್ ಇರಲಿ, ಪ್ರಜ್ವಲ್ ಇರಲಿ ತಮ್ಮ ಬಳಿ ಇರುವ ಎಲ್ಲ ಸಂಪನ್ಮೂಲಗಳನ್ನು ಉಪಯೋಗಿಸಿಕೊಂಡು ಸುಖವಾಗಿ, ನೆಮ್ಮದಿಯಿಂದ ಜೀವನ ಸಾಗಿಸಬಹುದಿತ್ತು. ಆದರೆ ಅಜ್ಞಾನದಿಂದ, ಅಹಂಕಾರದಿಂದ, ಮೋಹಕ್ಕೆ ಬಲಿಯಾಗಿ, ತಮ್ಮನ್ನು ತಾವು ನಿಯಂತ್ರಿಸಿ ಕೊಳ್ಳದೆ ಜೈಲಿನ ಖೈದಿಗಳಾಗುತ್ತಿರುವುದು ನಮಗೆಲ್ಲ ಒಂದು ಪಾಠವಾಗಲಿ…..

ಸ್ವಾತಂತ್ರ್ಯ ಎಂಬುದು ಹಣ ಅಧಿಕಾರಗಳಲ್ಲಿ ಇಲ್ಲ. ಅದು ನಮ್ಮ ಮನಸ್ಸಿನಲ್ಲಿ, ನಮ್ಮ ತಿಳುವಳಿಕೆಯಲ್ಲಿ, ನಮ್ಮ ನಡವಳಿಕೆಯಲ್ಲಿ ಇದೆ. ಅದನ್ನು ನಾವೆಲ್ಲರೂ ಅರಿತು, ಅಳವಡಿಸಿಕೊಂಡು ಅನುಭವಿಸೋಣ. ಈ ಮೂರ್ಖರಂತ ತಪ್ಪುಗಳನ್ನು ಮಾಡದಿರೋಣ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

6 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

12 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

16 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

17 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago