ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು. ಕಾಂಗ್ರೆಸ್ ನವರು ಶ್ರೀರಾಮನ ವಿರುದ್ಧ ಇದ್ದಾರೆ ಎಂದು ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ.
ರಾಮಮಂದಿರವನ್ನು ರಾಜಕೀಯಗೊಳಿಸಬಾರದು. ಶ್ರೀರಾಮಚಂದ್ರ ಎಲ್ಲರ ದೇವರು. ಕೇವಲ ಬಿಜೆಪಿಯವರ ದೇವರಲ್ಲ. ಎಲ್ಲಾ ಹಿಂದೂಗಳ ದೇವರು. ನಾವೂ ಶ್ರೀರಾಮಚಂದ್ರನ ಭಕ್ತರೇ. ಶ್ರೀರಾಮಚಂದ್ರನಿಗೆ ವಿರುದ್ಧವಾಗಿದ್ದೇವೆ ಎಂದು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಈ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸೀತಾ, ರಾಮ, ಲಕ್ಷ್ಮಣ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀ ರಾಮ ಟೆಂಪಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶ್ರೀರಾಮ ದೇವಸ್ಥಾನವನ್ನು ಇದರೊಂದಿಗೆ ಆಂಜನೇಯ ವಿಗ್ರಹವನ್ನೂ ಉದ್ಘಾಟಿಸಿದ್ದೇನೆ. ಇದನ್ನು ನಾವು ರಾಜಕಾರಣಕ್ಕಾಗಿ ಮಾಡಿರುವುದಲ್ಲ. ಕರ್ನಾಟಕ ರಾಜ್ಯದಲ್ಲಿ ಶ್ರೀರಾಮಚಂದ್ರನ ಬಹಳಷ್ಟು ದೇವಸ್ಥಾನಗಳಿವೆ. ನಮ್ಮೂರಿನಲ್ಲಿಯೂ ನಾನೇ ಶ್ರೀರಾಮಚಂದ್ರನ ದೇವಸ್ಥಾನವನ್ನು ಕಟ್ಟಿಸಿದ್ದೇನೆ. ಇದರಲ್ಲಿ ರಾಜಕೀಯ ಇಲ್ಲ. ಸಮಯ ದೊರೆತಾಗ ಅಯೋಧ್ಯೆಗೆ ನಾನು ಹೋಗುತ್ತೇನೆ. ಶ್ರೀರಾಮಚಂದ್ರನ ಮೂರ್ತಿ ಎಲ್ಲೆಡೆ ಒಂದೇ. ಅಯೋಧ್ಯೆಯಲ್ಲಿ ಮಾಡಿದರೂ ಒಂದೇ, ನಮ್ಮೂರಿನಲ್ಲಿ ಪೂಜೆ ಮಾಡಿದರೂ ಒಂದೇ. ಬಿಜೆಪಿಯವರು ಅಯೋಧ್ಯೆಯಲ್ಲಿ ರಾಮನನ್ನು ಮಾತ್ರ ಪ್ರತಿಷ್ಠಾಪಿಸಿದ್ದಾರೆ. ರಾಮ, ಆಂಜನೇಯ, ಸೀತೆ ಲಕ್ಷ್ಮಣನನ್ನು ಬೇರ್ಪಡಿಸಲಾಗುವುದಿಲ್ಲ. ಶ್ರೀರಾಮಚಂದ್ರ ಒಬ್ಬನೇ ಇರದೇ ಸೀತಾದೇವಿ, ಲಕ್ಷ್ಮಣ, ಆಂಜನೇಯ ಇದ್ದಾಗ ಮಾತ್ರ ಪರಿಪೂರ್ಣವಾಗುತ್ತದೆ. ಇವರು ಶ್ರೀರಾಮಚಂದ್ರನನ್ನೇ ಬೇರ್ಪಡೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಅದು ಸರಿ ಇಲ್ಲ ಎಂದರು.
ಕರ್ನಾಟಕದಲ್ಲಿ ರಾಮಮಂದಿರ ಕಾರ್ಯಕ್ರಮದ ಅಂಗವಾಗಿ ರಜೆ ಘೋಷಣೆ ಮಾಡಿಲ್ಲ ಎಂಬ ಬಗ್ಗೆ ಗೊಂದಲ ಸೃಷ್ಟಿ ಬೇಡ. ಕೇಂದ್ರ ಸರ್ಕಾರದವರು ಅರ್ಧ ದಿನ ರಜೆ ಕೊಟ್ಟಿದ್ದಾರೆ. ದೆಹಲಿ, ಪಂಜಾಬ್, ತೆಲಂಗಾಣ, ಪಶ್ಚಿಮ ಬಂಗಾಲ, ತಮಿಳುನಾಡು, ಕೇರಳದಲ್ಲಿಯೂ ರಜೆ ಕೊಟ್ಟಿಲ್ಲ ಎಂದರು.
ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಪುರುಷ ಶ್ರೀರಾಮನ ಆಶಯ ಎಂದು ತಿಳಿಸಿದರು.
ನಾನು ನಾಸ್ತಿಕನಲ್ಲ – ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾತ್ತೇವೆ, ಗುಡಿ ಕಟ್ಟುತ್ತೇವೆ, ಪೂಜಿಸುತ್ತೇವೆ ಎಂದು ಹೇಳಿದರು.
ಯಾವುದೇ ಧರ್ಮ ಜಾತಿ-ಧರ್ಮ ಆಧಾರದ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಶ್ರೀರಾಮ ಸಮಾಜಮುಖಿ ಆಗಿದ್ದರು. ಒಬ್ಬ ಮಡಿವಾಳನ ಮಾತಿಗೂ ಬೆಲೆ ಕೊಟ್ಟರು. ಪಿತೃವಾಕ್ಯ ಪರಿಪಾಲನೆಗೆ ವನವಾಸಕ್ಕೆ ಹೋದರು. ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇವರೆಲ್ಲಾ ಸಕುಟುಂಬಸ್ಥರು ಎಂದರು.
ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಆಶಯ ಶ್ರೀರಾಮನ ಆದರ್ಶ ಮತ್ತು ವ್ಯಕ್ತಿತ್ವದಲ್ಲಿದೆ. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು ಎನ್ನುವುದೇ ರಾಮಾಯಣ, ಮಹಾಭಾರತದ ಸಂದೇಶ ಎಂದು ತಿಳಿಸಿದರು.
ಪರಿಶಿಷ್ಠ ಪಂಗಡ ಸಮುದಾಯದ ವಾಲ್ಮೀಕಿ ಅವರು ರಾಮಾಯಣವನ್ನು ಬರೆದು ವಿಶ್ವಕ್ಕೆ ಕೊಟ್ಟರು. ದೇವರು ನಮ್ಮ ಆತ್ಮ ಮತ್ತು ಶರೀರದಲ್ಲೇ ಇದ್ದಾನೆ ಎಂದು ಬಸವಣ್ಣನವರು ನುಡಿದರು. ದೇಹವೇ ದೇಗುಲ ಎನ್ನುವ ಸಂದೇಶವನ್ನು ಮನುಷ್ಯ ಪ್ರಪಂಚಕ್ಕೆ ನೀಡಿದ್ದಾರೆ ಎಂದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…