ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ಇತ್ತೀಚೆಗೆ ಜೋಡಿ ಕೊಲೆ ಸಂಭವಿಸಿದ್ದು, ಕೊಲೆಗೂ ಮುನ್ನ ಆರೋಪಿಗಳು ದೂರು ನೀಡಲು ಬಂದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸುತ್ತಾರೆ ಇದಾದ ಕೆಲವೇ ನಿಮಿಷಗಳಲ್ಲಿ ಎರಡು ಹತ್ಯೆಗಳಾದವು ಎಂಬ ಪ್ರಶ್ನೆಗೆ ನಗರದಲ್ಲಿ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಇಲಾಖೆಯನ್ನು ಚುರುಕುಗೊಳಿಸಿದ್ದೇವೆ,
ಈ ಪ್ರಕರಣ ಸದ್ಯ ವಿಚಾರಣ ಹಂತದಲ್ಲಿದೆ ಇದನ್ನು ಈ ಪ್ರಕರಣವನ್ನು ಹಾಗೇ ಬಿಡುವುದಿಲ್ಲ, ಅಧಿಕಾರಿಗಳದ್ದು ಏನು ತಪ್ಪಿದೆ ಮತ್ತು ಈ ಪ್ರಕರಣ ಏತಕ್ಕಾಗಿ ಆಗಿದೆ ಎಂಬುದನ್ನು ತನಿಖೆ ನಂತರ ತಿಳಿಯಲಿದೆ, ಈ ಪ್ರಕರಣದಲ್ಲಿ ಪೊಲೀಸರ ಕೈವಾಡವೇನಾದರು ಇದ್ದರೆ ಅವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಹಾಗೂ ಆರೋಪಿಗಳಿಗೂ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲು ಸಿದ್ಧ ಎಂದರು.
ಕಾಂಗ್ರೆಸ್ ಕಾಲದಲ್ಲಿ 35 ಸಾವಿರ ಪೊಲೀಸ್ ಸಿಬ್ಬಂದಿಗಳ ಹುದ್ದೆ ಖಾಲಿ ಇತ್ತು ಅದನ್ನು ಈಗಾಗಲೇ ಭರ್ತಿ ಮಾಡಲಾಗಿದೆ ಉಳಿದ 12 ಸಾವಿರ ಕಾನ್ಸ್ಟೆ ಬಲ್ ಹುದ್ದೆಗಳು ಭರ್ತಿ ಮಾಡಲಿದ್ದೇವೆ, ಸಬ್ ಇನ್ಸ್ ಪೆಕ್ಟರ್ ಹಗರಣ ನಡೆಯದೇ ಇದ್ದಿದ್ದರೆ ಇಷ್ಟೊತ್ತಿಗೆ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಿ ತಾಲ್ಲೂಖನ ಸಿಬ್ಬಂದಿಗಳ ಕೊರತೆ ನೀಗುತ್ತಿತ್ತು,
ತಾಲ್ಲೂಕಿನಲ್ಲಿ ಆದಷ್ಟು ಬೇಗ ಜನಸಂಖ್ಯೆ ಮತ್ತು ಏರಿಯಾದ ಆಧಾರದ ಮೇಲೆ ಪೊಲೀಸ್ ಸಿಬ್ಬಂದಿಗಳ ಹೆಚ್ಚಿಗೆ ಮಾಡುವ ಎಲ್ಲಾ ಪ್ರಯತ್ನಗಳು ನಡೆಯುತ್ತಿದೆ ಎಂದರು.
ಪಿಎಸ್ ಐ ಹಗರಣದ ತನಿಖೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಿದ್ದೇವೆ, ಈಗಾಗಲೇ ಪ್ರಮುಖ ಆರೋಪಿಗಳನ್ನು ಜೈಲಿಗೆ ಕಳುಹಿಸಲಾಗಿದೆ, ಕೋರ್ಟ್ ಆದೇಶದ ಮೇರೆಗೆ ಮತ್ತೊಮ್ಮೆ ಪರೀಕ್ಷೆ ನಡೆಸಬೇಕಾ ಅಥವಾ ಈಗಾಗಲೇ ಪಾಸ್ ಆದ ಅಭ್ಯರ್ಥಿಗಳಿಗೆ ವರ್ಕ್ ಆರ್ಡರ್ ನೀಡಬೇಕಾ ಎಂಬುದನ್ನು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…