ಜೋಡೆತ್ತುಗಳಿಂದ ರಾಜ್ಯದ ಸರ್ವತೋಮುಖ ಅಭಿವೃದ್ಧಿ-ರಾಜಘಟ್ಟ ನಾರಾಯಣ ಸ್ವಾಮಿ

ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿರುವುದು ನಮಗೆ ಸಂತಸ ತಂದಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಈ ಜೋಡೆತ್ತುಗಳು ಶ್ರಮಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ನಾರಾಯಣ ಸ್ವಾಮಿ ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಹಿನ್ನೆಲೆ ತಾಲೂಕಿನ ರಾಜಘಟ್ಟ ಗ್ರಾಮದಲ್ಲಿ ಮುಗಿಲು ಮುಟ್ಟಿದ ಸಂಭ್ರಮ, ಪಟಾಕಿ ಸಿಡಿಸಿ, ಪರಸ್ಪರ ಸಿಹಿ‌ ಹಂಚಿಕೊಂಡು, ಸಿದ್ದರಾಮಯ್ಯ, ಡಿಕೆಶಿ‌ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಕೂಗಿ ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು. ಸಂಭ್ರಮ ನಂತರ ಮಾತನಾಡಿದ ಅವರು, ಮೊದಲ ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ರಾಜ್ಯದಲ್ಲಿ ಉತ್ತಮ‌ ಜನಪರ ಆಡಳಿತ ನಡೆಸಿದ್ದರು, ಎರಡನೇ‌ ಬಾರಿಗೂ ಉತ್ತಮ ಆಡಳಿತ ನಡೆಸುವ ಭರವಸೆ ಇದೆ ಎಂದರು.

ಪ್ರಮಾಣ ವಚನ ಸ್ವೀಕಾರ ಮಾಡಿದ ಒಂದೇ ಗಂಟೆಯಲ್ಲಿ ಕ್ಯಾಬಿನೆಟ್ ಸಭೆ ನಡೆಸಿ ಐದು ಗ್ಯಾರಂಟಿ ಯೋಜನೆಗೆ ತಾತ್ವಿಕ ಒಪ್ಪಿಗೆ ಸೂಚಿಸಿದ್ದಾರೆ. ನಂತರದ ದಿನಗಳಲ್ಲಿ ಮತ್ತೊಮ್ಮೆ ಸಚಿವ ಸಂಪುಟ ಸಭೆ ನಡೆಸಿ ಆ ಐದು ಗ್ಯಾರಂಟಿ ಯೋಜನೆ ಜಾರಿಗೆ ತರುತ್ತಾರೆ ಎಂದರು.

ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು. ಗೃಹ ಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯೂನಿಟ್ ವರೆಗೆ ವಿದ್ಯುತ್ ಉಚಿತ ಒದಗಿಸಲಾಗುವುದು. ಪದವೀಧರರಿಗೆ ಪ್ರೋತ್ಸಾಹ ಧನ, ಮಹಿಳೆಯರಿಗೆ ಧನ ಸಹಾಯ, ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್ ಪುನಾರಂಭ ಮಾಡಲು ಸಿದ್ದರಾಮಯ್ಯ ಸರ್ಕಾರ ನಿರ್ಧಾರ ಮಾಡಿರುವುದು ಸಂತಸದ ವಿಷಯ ಎಂದು ಹೇಳಿದರು.

ರಾಜಘಟ್ಟ ಹಾಲು ಉತ್ಪಾದಕರ ಸಂಘ ನಿರ್ದಶಕರಾದ ಜಗನ್ನಾಥ್, ನಿರ್ದೇಶಕರಾದ ಮಂಜುನಾಥ್, ಕಾಂಗ್ರೆಸ್ ಹಿರಿಯ ಮುಖಂಡರಾದ ಚನ್ನಪ್ಪ, ಮುನಿವೆಂಕಟಸ್ವಾಮಿ, ಯಶವಂತ್, ರಾಜಣ್ಣ, ಅಂಬರೀಶ್, ಎಲೆಕ್ಟ್ರೀಕಲ್ ರಾಜು, ಗಂಗರಾಜು, ಆರ್ ಹೆಚ್ ಆನಂದ್, ಆರ್,ಎಸ್, ಮೈಲಾರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *