ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿರುವುದು ನಮಗೆ ಸಂತಸ ತಂದಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಈ ಜೋಡೆತ್ತುಗಳು ಶ್ರಮಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ನಾರಾಯಣ ಸ್ವಾಮಿ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಹಿನ್ನೆಲೆ ತಾಲೂಕಿನ ರಾಜಘಟ್ಟ ಗ್ರಾಮದಲ್ಲಿ ಮುಗಿಲು ಮುಟ್ಟಿದ ಸಂಭ್ರಮ, ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಂಡು, ಸಿದ್ದರಾಮಯ್ಯ, ಡಿಕೆಶಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಕೂಗಿ ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು. ಸಂಭ್ರಮ ನಂತರ ಮಾತನಾಡಿದ ಅವರು, ಮೊದಲ ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ರಾಜ್ಯದಲ್ಲಿ ಉತ್ತಮ ಜನಪರ ಆಡಳಿತ ನಡೆಸಿದ್ದರು, ಎರಡನೇ ಬಾರಿಗೂ ಉತ್ತಮ ಆಡಳಿತ ನಡೆಸುವ ಭರವಸೆ ಇದೆ ಎಂದರು.
ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು. ಗೃಹ ಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯೂನಿಟ್ ವರೆಗೆ ವಿದ್ಯುತ್ ಉಚಿತ ಒದಗಿಸಲಾಗುವುದು. ಪದವೀಧರರಿಗೆ ಪ್ರೋತ್ಸಾಹ ಧನ, ಮಹಿಳೆಯರಿಗೆ ಧನ ಸಹಾಯ, ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್ ಪುನಾರಂಭ ಮಾಡಲು ಸಿದ್ದರಾಮಯ್ಯ ಸರ್ಕಾರ ನಿರ್ಧಾರ ಮಾಡಿರುವುದು ಸಂತಸದ ವಿಷಯ ಎಂದು ಹೇಳಿದರು.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…