
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ ಪಾಲನೆ ಮಾಡದಿರುವುದರಿಂದ ಅಪಘಾತ ಹಾಗೂ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆಯ ನಿರಂತರವಾಗಿ ನಡೆಯಲಿದೆ. ಬೈಕ್ ಸೇರಿದಂತೆ ಇತರೆ ವಾಹನಗಳವರು ಅಗತ್ಯ ದಾಖಲೆ, ಚಾಲನ ಪರವಾನಗಿಯನ್ನು ಕಡ್ಡಾಯವಾಗಿ ಹೊಂದರಬೇಕು ಎಂದು ಡಿವೈಎಸ್‌ಪಿ ಪಾಂಡುರಂಗ ತಿಳಿಸಿದ್ದರು.

2026 ಜ.1 ರಿಂದ ಹೆಲೈಟ್ ಧರಿಸದೆ ವಾಹನ ಚಲಾಯಿಸುವುದು ಕಂಡುಬಂದಲ್ಲಿ, ಯಾವುದೇ ಮುಲಾಜಿಲ್ಲದೆ ಮೋಟಾರು ವಾಹನ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ, ದಂಡ (Fine) ವಿಧಿಸಲಾಗುವುದು ಹಾಗೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ದಯವಿಟ್ಟು ಪೊಲೀಸರಿಗೆ ಅಥವಾ ದಂಡಕ್ಕೆ ಹೆದರಿ ಹೆಲೈಟ್ ಧರಿಸಬೇಡಿ. ನಿಮ್ಮ ಮನೆಯಲ್ಲಿ ನಿಮಗಾಗಿ ಕಾಯುವ ತಂದೆ-ತಾಯಿ, ಪತ್ನಿ-ಮಕ್ಕಳಿದ್ದಾರೆ ಎಂಬುದನ್ನು ನೆನಪಿನಲ್ಲಿಡಿ. ತಲೆಗೆ ಪೆಟ್ಟು ಬಿದ್ದು ಪ್ರಾಣ ಕಳೆದುಕೊಳ್ಳುವುದನ್ನು ತಪ್ಪಿಸಲು ಉತ್ತಮ ಗುಣಮಟ್ಟದ ಪೂರ್ಣ ಪ್ರಮಾಣದ ಹೆಲೈಟ್ ಧರಿಸಿ ಎಂದು ಹೇಳಿದರು.

ಎಲ್ಲಾ ದ್ವಿಚಕ್ರ ವಾಹನ ಸವಾರರು ಇಂದೇ ಎಚ್ಚೆತ್ತುಕೊಂಡು, ಕಡ್ಡಾಯವಾಗಿ ಹೆಲೈಟ್ ಧರಿಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಿದರು.

ಡಿವೈಎಸ್ಪಿ ಪಾಂಡುರಂಗ ಹೇಳಿಕೆ ಹಿನ್ನೆಲೆ ಹೆಲ್ಮೆಟ್ ಮಾರಾಟಗಾರರು ದೊಡ್ಡಬಳ್ಳಾಪುರಕ್ಕೆ ಲಗ್ಗೆ ಇಟ್ಟಿದ್ದಾರೆ. ಹೆಲ್ಮೆಟ್ ಕಡ್ಡಾಯ ಹಿನ್ನೆಲೆ ಬೈಕ್ ಸವಾರರು ಹೆಲ್ಮೆಟ್ ಖರೀದಿಯಲ್ಲಿ ನಿರತರಾಗಿದ್ದಾರೆ…..