
ಜಾತ್ಯಾತೀತ ಜನತಾದಳ ದೊಡ್ಡಬಳ್ಳಾಪುರ ತಾಲೂಕು ವತಿಯಿಂದ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಜ.10(ಶನಿವಾರ)ರಂದು ದೊಡ್ಡಬಳ್ಳಾಪುರ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜೆ.ಕೆ ಕೃಷ್ಣಾರೆಡ್ಡಿ ಭಾಗವಹಿಸಲಿದ್ದಾರೆ ಎಂದರು.
ಸಭೆಯ ಉದ್ದೇಶ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಪೂರ್ವ ಸಿದ್ಧತೆಯ ಬಗ್ಗೆ ಚರ್ಚೆ, ಹಿತದೃಷ್ಟಿಯಿಂದ ಪಕ್ಷದ ಕಾರ್ಯಕರ್ತರ ಹಾಗೂ ಸ್ಥಳೀಯ ನಾಯಕರ ನಾಡಿಮಿಡಿತವನ್ನು ಅರಿಯುವುದು. ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷದ ಮುಂದಿನ ಗುರಿಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಆದ್ದರಿಂದ ಪಕ್ಷದ ಎಲ್ಲಾ ಹಿರಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಬೇಕು ಎಂದು ಮನವಿ ಮಾಡಿದರು ಎಂದು ಹೇಳಿದರು.
ಎನ್ ಡಿಎ ಆದ ಮೇಲೆ ನಮ್ಮ ತಾಲೂಕಿನಲ್ಲಿ ಪಕ್ಷ ಯಾವ ಸ್ಥಿತಿಯಲ್ಲಿದೆ ಎಂಬ ತಿಳಿಯಲು ಸಭೆಯನ್ನ ಆಯೋಜನೆ ಮಾಡಲಾಗಿದೆ. ಜಾಲಪ್ಪನವರು ಪಕ್ಷದಿಂದ ಹೋದಾಗಿನಿಂದ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಲು ಆಗುತ್ತಿಲ್ಲ. ಅದಕ್ಕೆ ಕಾರಣಗಳನ್ನು ಹುಡುಕಲು ಸಭೆ ಕರೆಯಲಾಗಿದೆ.
ಈ ಸಭೆ ಬಲ ಪ್ರದರ್ಶನ ಸಭೆಯಲ್ಲ, ಕಾರ್ಯಕರ್ತರ ಸಭೆ ಇದು ಎಂದು ಹೇಳಿದರು..
ಈ ವೇಳೆ ನಗರಸಭೆ ಸದಸ್ಯರಾದ ತಾ.ನ ಪ್ರಭುದೇವ್, ವಡ್ಡರಹಳ್ಳಿ ರವಿ, ಡಾ. ವಿಜಯ್ ಕುಮಾರ್, ಪಿಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ರಾಮಚಂದ್ರಬಾಬು, ಕೆಂಪರಾಜು, ಸತ್ಯನಾರಾಯಣ, ಶಾಂತಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.