ಜ.10ರಂದು ಜೆಡಿಎಸ್ ಕಾರ್ಯಕರ್ತರ ಸಭೆ- ಈ ಸಭೆ ಬಲ ಪ್ರದರ್ಶನ ಸಭೆಯಲ್ಲ, ಕಾರ್ಯಕರ್ತರ ಸಭೆ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ಜಾತ್ಯಾತೀತ ಜನತಾದಳ ದೊಡ್ಡಬಳ್ಳಾಪುರ ತಾಲೂಕು ವತಿಯಿಂದ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಜ.10(ಶನಿವಾರ)ರಂದು ದೊಡ್ಡಬಳ್ಳಾಪುರ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜೆ.ಕೆ ಕೃಷ್ಣಾರೆಡ್ಡಿ ಭಾಗವಹಿಸಲಿದ್ದಾರೆ ಎಂದರು.

ಸಭೆಯ ಉದ್ದೇಶ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಪೂರ್ವ ಸಿದ್ಧತೆಯ ಬಗ್ಗೆ ಚರ್ಚೆ,  ಹಿತದೃಷ್ಟಿಯಿಂದ ಪಕ್ಷದ ಕಾರ್ಯಕರ್ತರ ಹಾಗೂ ಸ್ಥಳೀಯ ನಾಯಕರ ನಾಡಿಮಿಡಿತವನ್ನು ಅರಿಯುವುದು. ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷದ ಮುಂದಿನ ಗುರಿಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಆದ್ದರಿಂದ ಪಕ್ಷದ ಎಲ್ಲಾ ಹಿರಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಬೇಕು ಎಂದು ಮನವಿ ಮಾಡಿದರು ಎಂದು ಹೇಳಿದರು.

ಎನ್ ಡಿಎ ಆದ ಮೇಲೆ ನಮ್ಮ ತಾಲೂಕಿನಲ್ಲಿ ಪಕ್ಷ ಯಾವ ಸ್ಥಿತಿಯಲ್ಲಿದೆ ಎಂಬ ತಿಳಿಯಲು ಸಭೆಯನ್ನ ಆಯೋಜನೆ ಮಾಡಲಾಗಿದೆ. ಜಾಲಪ್ಪನವರು ಪಕ್ಷದಿಂದ ಹೋದಾಗಿನಿಂದ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಲು ಆಗುತ್ತಿಲ್ಲ. ಅದಕ್ಕೆ ಕಾರಣಗಳನ್ನು ಹುಡುಕಲು ಸಭೆ ಕರೆಯಲಾಗಿದೆ.

ಈ ಸಭೆ ಬಲ ಪ್ರದರ್ಶನ ಸಭೆಯಲ್ಲ, ಕಾರ್ಯಕರ್ತರ ಸಭೆ ಇದು ಎಂದು ಹೇಳಿದರು..

ಈ ವೇಳೆ ನಗರಸಭೆ ಸದಸ್ಯರಾದ ತಾ.ನ ಪ್ರಭುದೇವ್, ವಡ್ಡರಹಳ್ಳಿ ರವಿ, ಡಾ. ವಿಜಯ್ ಕುಮಾರ್, ಪಿಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ರಾಮಚಂದ್ರಬಾಬು, ಕೆಂಪರಾಜು, ಸತ್ಯನಾರಾಯಣ, ಶಾಂತಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

44 minutes ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

3 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

4 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

5 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

10 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

11 hours ago