ದಕ್ಷಿಣ ಭಾರತದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ತಾಲೂಕಿನ ತೂಬಗೆರೆ ಹೋಬಳಿಯ ಶ್ರೀ ಘಾಟಿ ಕ್ಷೇತ್ರದಲ್ಲಿ ನೆಲೆಸಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಕಾರ್ಯಕ್ರಮವು ಜ.16ನೇ ಮಂಗಳವಾರ ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನ ಮುಹೂರ್ತದಲ್ಲಿ ನಡೆಯಲಿದೆ.
ಷಷ್ಠಿಯ ದಿನದಂದು ಮುಂಜಾನೆ 3ರಿಂದ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ಆರಂಭವಾಗಲಿವೆ. ಅಭಿಷೇಕ ಕಾರ್ಯಗಳು ಪ್ರಾರಂಭಗೊಂಡು, 5:30ಕ್ಕೆ ಮಹಾಮಂಗಳಾರತಿ ನೆರವೇರಲಿದೆ. ಗರ್ಭಗುಡಿಯಲ್ಲಿನ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಲಕ್ಷ್ಮೀನರಸಿಂಹಸ್ವಾಮಿ ಮೂರ್ತಿಗಳಿಗೆ ಪ್ರಾತಃ ಕಾಲದಲ್ಲಿ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ರುದ್ರಾಭಿಷೇಕ, ಶ್ರೀಗಂದಾಭಿಷೇಕ, ಭಸ್ಮದಭಿಷೇಕದೊಂದಿಗೆ ಹೂವಿನ ಅಲಂಕಾರ ನೆರವೇರಿಸಲಾಗುತ್ತಿದೆ. ರಾತ್ರಿ 8:30ರವರೆಗೂ ಭಕ್ತರಿಗೆ ದರ್ಶನ ವ್ಯವಸ್ಥೆ ದೊರೆಯಲಿದೆ.