ಜ.16ರಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ ವತಿಯಿಂದ ಘಾಟಿಯಿಂದ ದೊಡ್ಡಬಳ್ಳಾಪುರ, ಬೆಂಗಳೂರು, ಚಿಕ್ಕಬಳ್ಳಾಪುರ, ಗೌರಿಬಿದನೂರು, ಕೋಲಾರ ಹಾಗೂ ಮುಂತಾದ ಸ್ಥಳಗಳಿಗೆ 84 ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ ದೊಡ್ಡಬಳ್ಳಾಪುರ ಘಟಕದ ವ್ಯವಸ್ಥಾಪಕ ಎಸ್.ಆರ್.ಸಂತೋಷ್ ತಿಳಿಸಿದ್ದಾರೆ.
‘ಶಕ್ತಿ ಯೋಜನೆ’ ಅಡಿಯಲ್ಲಿ ಮಹಿಳಾ ಪ್ರಯಾಣಿಕರು ಉಚಿತವಾಗಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಅವಕಾಶವಿರುತ್ತದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿಯೇ ಪ್ರಯಾಣಿಸಲು ಕೋರಲಾಗಿದೆ.