ದಕ್ಷಿಣ ಭಾರತದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ತಾಲೂಕಿನ ತೂಬಗೆರೆ ಹೋಬಳಿಯ ಶ್ರೀ ಘಾಟಿ ಕ್ಷೇತ್ರದಲ್ಲಿ ನೆಲೆಸಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಕಾರ್ಯಕ್ರಮವು ಜ.16ನೇ ಮಂಗಳವಾರ ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನ ಮುಹೂರ್ತದಲ್ಲಿ ನಡೆಯಲಿದೆ.
ಚಿನ್ನಾಭರಣ ಕಳವು ಸೇರಿದಂತೆ ಯಾವುದೇ ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲು ದ್ರೋಣ್ ಕ್ಯಾಮೆರಾ ಮತ್ತು ದೇವಾಲಯದ ಸುತ್ತಾಮುತ್ತಾ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಬ್ರಹ್ಮರಥೋತ್ಸವಕ್ಕೆ ಬರುವ ಸಹಸ್ರಾರು ಭಕ್ತಾಧಿಗಳಿಗೆ ಮೊಬೈಲ್ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಶುಧ್ಧ ಕುಡಿಯುವ ನೀರಿನ ಟ್ಯಾಂಕರ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಸಂಚಾರ ದಟ್ಟಣೆ ನಿಯಂತ್ರಿಸಲು ದೇವಾಲಯದಿಂದ 1 ಕಿ.ಮೀ ಅಂತರದಲ್ಲೇ 14 ಕಡೆ ಬೈಕ್, ಕಾರು, ಬಸ್ ಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.
ಘಾಟಿ ಬ್ರಹ್ಮರಥೋತ್ಸವಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಿದ್ದು, 500ಮಂದಿ ಪೊಲೀಸ್ ಸಿಬ್ಬಂದಿ, 100 ಮಂದಿ ಗೃಹ ರಕ್ಷಕ ಸಿಬ್ಬಂದಿ, 3 ಜಿಲ್ಲಾ ಸಶಸ್ತ್ರ ಪಡೆಯಿಂದ 3 ತುಕಡಿ, ಕರ್ನಾಟಕ ರಾಜ್ಯ ಮೀಸಲು ಪಡೆಯಿಂದ ಒಂದು ತುಕಡಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಅಗತ್ಯವಿರುವ ಕಡೆ ಬ್ಯಾರಿಕೇಡ್ ವ್ಯವಸ್ಥೆ ಸಹ ಮಾಡಲಾಗಿದೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಮುನಿಕೃಷ್ಣ ಅವರು ತಿಳಿಸಿದ್ದಾರೆ.
ಜ.16ರಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ ವತಿಯಿಂದ ಘಾಟಿಯಿಂದ ದೊಡ್ಡಬಳ್ಳಾಪುರ, ಬೆಂಗಳೂರು, ಚಿಕ್ಕಬಳ್ಳಾಪುರ, ಗೌರಿಬಿದನೂರು, ಕೋಲಾರ ಹಾಗೂ ಮುಂತಾದ ಸ್ಥಳಗಳಿಗೆ 84 ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ ದೊಡ್ಡಬಳ್ಳಾಪುರ ಘಟಕದ ವ್ಯವಸ್ಥಾಪಕ ಎಸ್.ಆರ್.ಸಂತೋಷ್ ತಿಳಿಸಿದ್ದಾರೆ.
‘ಶಕ್ತಿ ಯೋಜನೆ’ ಅಡಿಯಲ್ಲಿ ಮಹಿಳಾ ಪ್ರಯಾಣಿಕರು ಉಚಿತವಾಗಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಅವಕಾಶವಿರುತ್ತದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿಯೇ ಪ್ರಯಾಣಿಸಲು ಕೋರಲಾಗಿದೆ.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…