ಜ.18 (ಶನಿವಾರ) ಬೆಸ್ಕಾಂ ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆ ಹಾಗೂ ಸುರಕ್ಷತಾ ದಿನ ಆಯೋಜನೆ

ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಯ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದಂತೆ ಜ.18ರ ಶನಿವಾರದಂದು ಮಧ್ಯಾಹ್ನಾ 3ಗಂಟೆಗೆ ನಗರದ ಎಪಿಎಂಸಿ ಯಾರ್ಡ್ ಎದುರಿನ ಬೆಸ್ಕಾಂ ದೊಡ್ಡಬಳ್ಳಾಪುರ ನಗರ ಉಪವಿಭಾಗ ಕಚೇರಿಯಲ್ಲಿ ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆ ಹಾಗೂ ಸುರಕ್ಷತಾ ದಿನವನ್ನು ಆಯೋಜಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು(ವಿ), ಬೆವಿಕಂ(ವಿ),‌ ನಗರ ಉಪ-ವಿಭಾಗ, ದೊಡ್ಡಬಳ್ಳಾಪುರ‌ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ…

ಗ್ರಾಹಕರಲ್ಲಿ ಕುಂದು-ಕೊರತೆ/ ನ್ಯೂನ್ಯತೆಗಳು ಇದ್ದಲ್ಲಿ ಪರಸ್ಪರ ಚರ್ಚಿಸಿ ಸ್ನೇಹಪೂರ್ವಕವಾಗಿ ಪರಿಹರಿಸಿಕೊಳ್ಳಲು ಉತ್ತಮ ಸಲಹೆ/ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಸಲುವಾಗಿ ಕಂಪನಿಯ ಆದೇಶದಂತೆ ಶನಿವಾರದಂದು ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆ ಹಾಗೂ ಸುರಕ್ಷತಾ ದಿನವನ್ನು ಆಯೋಜಿಸಲಾಗುತ್ತಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು(ವಿ), ಬೆವಿಕಂ(ವಿ),‌ ನಗರ ಉಪ-ವಿಭಾಗ, ದೊಡ್ಡಬಳ್ಳಾಪುರ‌ ಇವರು ಹೇಳಿದ್ದಾರೆ.

ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ (o&M-1 o&M-2, ಬಾಶೆಟ್ಟಿಹಳ್ಳಿ, ಮೆಳೇಕೋಟೆ ಕ್ರಾಸ್ ಶಾಖೆ) ವಿದ್ಯುತ್ ಗ್ರಾಹಕರು ಸಭೆಯಲ್ಲಿ ಪಾಲ್ಗೊಂಡು ಕಂಪನಿಯೊಂದಿಗೆ ಸಹಕರಿಸಲು ಕೋರಲಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

36 minutes ago

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

6 hours ago

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

6 hours ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

16 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

16 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

17 hours ago