
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಂಬಂಧಿಸಿದಂತೆ ವಿವಿಧ ಹಂತಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ವೇಳಾಪಟ್ಟಿಯ ಪ್ರಕಾರ, ನವೆಂಬರ್ 23, 2026 ರೊಳಗೆ ಮತಗಟ್ಟೆಗಳ ತರ್ಕಬದ್ಧೀಕರಣ ಹಾಗೂ ಮರುಹೊಂದಾಣಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಡಿಸೆಂಬರ್ 1, 2026ರಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಡಿಸೆಂಬರ್ 1, 2026 ರಿಂದ ಡಿಸೆಂಬರ್ 31, 2026 ರವರೆಗೆ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಲ್ಲಿಕೆಯಾದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಜನವರಿ 14, 2027 ರೊಳಗೆ ವಿಲೇವಾರಿ ಮಾಡಲಾಗುತ್ತದೆ. ಅಂತಿಮವಾಗಿ, ಜನವರಿ 20, 2027 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಆಕ್ಷೇಪಣೆ ಮತ್ತು ಹೆಸರು ತೆಗೆದುಹಾಕಲು, ಈಗಾಗಲೇ ಬೇರೆ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ, ಶಾಶ್ವತವಾಗಿ ಸ್ಥಳಾಂತರಗೊಂಡಿರುವ ಮತ್ತು ಭಾರತದ ಪ್ರಜೆಯಲ್ಲದವರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದರೆ ತೆಗೆಯಲು ನಮೂನೆ-7 ರಲ್ಲಿ ಅವಕಾಶ ಕಲ್ಪಿಸಿ ಪರಿಷ್ಕರಿಸಲಾಗಿದೆ. ಇದರ ಜೊತೆಗೆ ಮರಣ ಪ್ರಮಾಣ ಪತ್ರ ಲಗತ್ತಿಸಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಪ್ರಸ್ತುತ ನಮೂನೆ-8 ರನ್ವಯ ಮತದಾರರ ಪಟ್ಟಿಯಲ್ಲಿನ ಹೆಸರು, ವಿಳಾಸ ಮತ್ತು ಭಾವಚಿತ್ರಗಳಿಗೆ ಸಂಬಂಧಿಸಿದಂತೆ ತಿದ್ದುಪಡಿ ಜೊತೆಗೆ ಒಂದು ವಿಧಾನ ಸಭೆ ಕ್ಷೇತ್ರದಿಂದ ಮತ್ತೊಂದು ವಿಧಾನ ಸಭೆ ಕ್ಷೇತ್ರಕ್ಕೆ ಮತದಾರರ ವರ್ಗಾವಣೆ, ಒಂದು ವಿಧಾನ ಸಭೆ ಕ್ಷೇತ್ರದಲ್ಲಿನ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ವರ್ಗಾವಣೆ, ಬದಲಿ ಎಪಿಕ್ಗಳಿಗಾಗಿ ಮನವಿ ಮತ್ತು ಅಂಗವೈಪಲ್ಯ ಹೊಂದಿರುವ ಮತದಾರರ ತಮ್ಮ ಅಂಗ ವೈಕಲ್ಯ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.
ನಮೂನೆ-6 ರಲ್ಲಿನ ಮಾಹಿತಿ ದೃಢೀಕರಿಸಲು ಆನ್ ಲೈನ್ ಮತ್ತು ಆಫ್ಘನ್ ಎರಡರಲ್ಲೂ ಅವಕಾಶವಿದೆ. ಆನ್ ಲೈನ್ ವ್ಯವಸ್ಥೆಯಡಿ ಎನ್.ವಿಎಸ್.ಪಿ(NVSP) ಮತ್ತು ವೋಟರ್ ಹೆಲ್ಪಲೈನ್ ಆಫ್ (VHA) ನಲ್ಲಿ ಮತದಾರರು ಮಾಹಿತಿಯನ್ನು ದೃಢೀಕರಿಸಲು ಅವಕಾಶವಿದೆ, ಆಧಾರ್ ಸ್ವಯಂ ದೃಢೀಕರಣಕ್ಕೆ, ಆಧಾರ್ ಜೋಡಣೆಯಾಗಿರುವ ಮೊಬೈಲ್ಗೆ ಸ್ವೀಕೃತವಾಗುವ ಒಟಿಪಿ(OTP) ಸೌಲಭ್ಯವನ್ನು ಒದಗಿಸಿದೆ. ಅಕಸ್ಮಾತ್ ಒಟಿಪಿ(OTP) ಸೌಲಭ್ಯ ಸಹಿತ ದೃಢೀಕರಣ ಸಾದ್ಯವಾಗದಿದ್ದಲ್ಲಿ ಮತದಾರರು ಆಧಾರ್ ನ್ನು ಮೇಲಿನ ಆಪ್ ಗಳಲ್ಲಿ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅಕಸ್ಮಾತ್ ಅಪ್ಲೋಡ್ ಮಾಡಲು ಸಾದ್ಯವಾಗದಿದ್ದಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಎಸ್ಐಆರ್ ಪ್ರಕ್ರಿಯೆ ಮುಕ್ತಾಯವಾಗಿದ್ದು ಅಂತಿಮ ಮತದಾರರ ಪಟ್ಟಿಯಲ್ಲಿ 3,95,473 ಪುರುಷ ಮತದಾರರು, 4,09,001 ಮಹಿಳಾ ಮತದಾರರು ಹಾಗೂ 60 ಇತರೆ ಮತದಾರರು ಸೇರಿದಂತೆ ಒಟ್ಟಾರೆ ಜಿಲ್ಲೆಯಲ್ಲಿ 8,04,534 ಮತದಾರರಿದ್ದಾರೆ.
*ವಿಧಾನಸಭಾ ಕ್ಷೇತ್ರವಾರು ಮಾಹಿತಿ*
1. ಹೊಸಕೋಟೆ ವಿಧಾನಸಭಾ ಕ್ಷೇತ್ರ- 1,08,430 ಪುರುಷರು, 1,11,757 ಮಹಿಳೆಯರು ಹಾಗೂ 4 ಇತರೆ ಮತದಾರರು ಸೇರಿದಂತೆ 2,20,191 ಮತದಾರರಿದ್ದಾರೆ.
2. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 97,048 ಪುರುಷರು, 99,918 ಮಹಿಳೆಯರು ಹಾಗೂ 11 ಇತರೆ ಮತದಾರರು ಸೇರಿದಂತೆ 1,96,977 ಮತದಾರರಿದ್ದಾರೆ.
3. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 95,589 ಪುರುಷರು, 98,740 ಮಹಿಳೆಯರು ಹಾಗೂ 1 ಇತರೆ ಮತದಾರರು ಸೇರಿದಂತೆ 1,94,330 ಮತದಾರರಿದ್ದಾರೆ.
4. ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ 94,406 ಪುರುಷರು, 98,586 ಮಹಿಳೆಯರು ಹಾಗೂ 44 ಇತರೆ ಮತದಾರರು ಸೇರಿದಂತೆ 1,93,036 ಮತದಾರರಿದ್ದಾರೆ.
18-19 ವರ್ಷ ವಯಸ್ಸಿನ 14,568 ಮತದಾರರಿದ್ದಾರೆ, 8,604 ಮಂದಿ 85 ವರ್ಷಕ್ಕೂ ಮೇಲ್ಪಟ್ಟ ಮತದಾರರಿದ್ದಾರೆ. 12,151 ವಿಶೇಷಚೇತನ ಮತದಾರರಿದ್ದಾರೆ. 06 ಎನ್ಆರ್ಐ (ಅನಿವಾಸಿ ಭಾರತೀಯ) ಮತದಾರರಿದ್ದಾರೆ. 108 ಸೇವಾ ಮತದಾರರಿದ್ದಾರೆ ಜಿಲ್ಲೆಯಲ್ಲಿ ಮತದಾರರ ಲಿಂಗಾನುಪಾತದಲ್ಲಿ ಮಹಿಳಾ ಮತದಾರರೇ ಹೆಚ್ಚಾಗಿದ್ದಾರೆ. 3,95,473 ಪುರುಷ ಮತದಾರರಿದ್ದು, 4,09,061 ಮಹಿಳಾ ಮತದಾರರಿದ್ದಾರೆ. ಜನಸಂಖ್ಯೆಗನುಗುಣವಾಗಿ 1034 ಲಿಂಗಾನುಪಾತ ಇದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್. ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.