ಜ.21 ಹಾಗೂ 22 ರಂದು ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿ ನಡೆಯಲಿದೆ.
ಪಂದ್ಯಾವಳಿಯಲ್ಲಿ ಒಟ್ಟು 18 ಜಿಲ್ಲೆಗಳು ಹಾಗೂ 34 ಕ್ಲಬ್ ಗಳಿಂದ 1,150 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಟೇಕ್ವಾಂಡೊ ಅಸೋಸಿಯೇಷನ್ ಅಧ್ಯಕ್ಷ ಟಿ. ಪ್ರವೀಣಕುಮಾರ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಭಾರತ ಸರ್ಕಾರ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಹಾಗೂ ರಾಜ್ಯ ಟೆಕ್ವಾಂಡೋ ಅಸೋಸಿಯೇಷನ್ ವತಿಯಿಂದ ಎರಡು ದಿನಗಳ 39ನೇ ರಾಜ್ಯಮಟ್ಟದ ಸಬ್ ಜೂನಿಯರ್, ಜೂನಿಯರ್ ಹಾಗೂ ಸೀನಿಯರ್ ಮಟ್ಟದ ಟೆಕ್ವಾಂಡೋ ಪಂದ್ಯಾವಳಿ ನಡೆಯಲಿದೆ ಎಂದರು.
ಅಸೋಸಿಯೇಷನ್ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಪಂದ್ಯಾವಳಿಯಲ್ಲಿ 8 ರಿಂದ 50 ವರ್ಷ ವಯೋಮಾನದವರು ಭಾಗವಹಿಸಲಿದ್ದಾರೆ. ವಿಜೇತರಿಗೆ ಚಿನ್ನದ ಪದಕ ನೀಡಲಾಗುವುದು. ರಾಜ್ಯಮಟ್ಟದಲ್ಲಿ ವಿಜೇತರಾದವರನ್ನು ಪುದುಚೇರಿ ಹಾಗೂ ವಿಶಾಖಪಟ್ಟಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೇಕ್ವಾಂಡೋ ಪಂದ್ಯಾವಳಿಗೆ ಕಳುಹಿಸಿಕೊಡಲಾಗುವುದು ಎಂದರು.
ವಿಶಾಖಪಟ್ಟಣದಲ್ಲಿ ಜೂನಿಯರ್( 8 ವರ್ಷದಿಂದ 17 ವರ್ಷದೊಳಗಿನ) , ಪುದುಚೇರಿಯಲ್ಲಿ ಸೀನಿಯರ್(17 ವರ್ಷಕ್ಕಿಂತ ಮೇಲ್ಪಟ್ಟು) ಚಾಂಪಿಯನ್ ಶಿಪ್ ನಡೆಯಲಿದೆ. ಇಲ್ಲಿ ಗೆದ್ದವರು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.
ತೀರ್ಪು ಹಾಗೂ ಅಂಕಗಳನ್ನು ಪ್ರದರ್ಶಿಸಲು
ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬಳಸುವ ಎಲೆಕ್ಟ್ರಾನಿಕ್ ಸಾಧನಗಳನ್ನು ಇಲ್ಲಿ ಬಳಸುತ್ತಿರುವುದು ವಿಶೇಷ ಎಂದು ಹೇಳಿದರು.
ಒಟ್ಟು 7 ಅಂಕಣಗಳಲ್ಲಿ ತಲಾ ಎರಡು ನಿಮಿಷದ ಮೂರು ಪಂದ್ಯಗಳು ನಡೆಯಲಿವೆ ಎಂದರು.
ನಾರಾಯಣಸ್ವಾಮಿ ಮಾತನಾಡಿ, 2008 ರಲ್ಲಿ ಜಿಲ್ಲೆಯಲ್ಲಿ ಟೆಕ್ವಾಂಡೋ ತರಬೇತಿ ಆರಂಭಿಸಲಾಯಿತು. ಪ್ರಸ್ತುತ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಟೆಕ್ವಾಂಡೋ ಕ್ರೀಡೆ ಚಾಲ್ತಿಯಲ್ಲಿದೆ. ಗ್ರಾಮಾಂತರ ಜಿಲ್ಲೆಯಿಂದ ಪಂದ್ಯಾವಳಿಯಲ್ಲಿ ಒಟ್ಟು 125 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ರಾಷ್ಟ್ರಮಟ್ಟದಲ್ಲಿ ಸಬ್ ಜೂನಿಯರ್, ಕೆಡೆಟ್, ಜೂನಿಯರ್, ಸಿನಿಯರ್ ಎಂಬ ನಾಲ್ಕು ವಿಭಾಗದಲ್ಲಿ ಪಂದ್ಯ ನಡೆಯಲಿದೆ ಎಂದು ವಿವರಿಸಿದರು.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…